Mysore
14
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಪಿಎಸ್‌ ಐ ನೇಮಕಾತಿ ಅಕ್ರಮ ಆರೋಪ : ಮುಖ್ಯಮಂತ್ರಿಗೆ ಆಯೋಗ ವರದಿ ಸಲ್ಲಿಕೆ!

ಬೆಂಗಳೂರು : ಪಿಎಸ್‌ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.

ರಾಜ್ಯ ಸರ್ಕಾರವು ಕಳೆದ ವರ್ಷದ ಜುಲೈ 21 ರಂದು ಅಕ್ರಮ ನಡೆದಿರುವ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ನ್ಯಾಯಾಂಗ ತನಿಖೆಗೆ ಆದೇಶ ನೀಡಿತ್ತು.
ಕಳೆದ ಬಿಜೆಪಿ ಸರ್ಕಾರದಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಭಾರಿ ಸದ್ದು ಮಾಡಿತ್ತು.

ಇದೀಗ ಪಿಎಸ್‌ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!