ಮಧುಗಿರಿ: ಕಚೇರಿಗೆ ದೂರು ನೀಡಲು ಬಂದಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಮಧುಗಿರಿ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಜಮೀನು ವ್ಯಾಜ್ಯ ವಿಚಾರವಾಗಿ ಪಾವಗಡ ಮೂಲದ ಮಹಿಳೆ ಕಚೇರಿಗೆ ದೂರು ನೀಡಲು ಬಂದಿದ್ದರು. ಈ ವೇಳೆ ಮಹಿಳೆಯನ್ನು ಮಾತುಕತೆಗೆ ಎಂದು ಕರೆಸಿಕೊಂಡ ಡಿವೈಎಸ್‌ಪಿ ರಾಮಚಂದ್ರಪ್ಪ ಮಹಿಳೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯವೆಸಗಲು ಪ್ರಯತ್ನಿಸಿದ್ದಾರೆ.
ಲೈಂಗಿಕ ದೌರ್ಜನ್ಯದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ನಂತರ ಡಿವೈಎಸ್‌ಪಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಸಂತ್ರಸ್ತೆ ಮಹಿಳೆ ಮಧುಗಿರಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಶುಕ್ರವಾರ ರಾತ್ರಿ ಬಂಧಿಸಿದ ಪೊಲೀಸರು ಶನಿವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ವಿಚಾರಣೆಯ ನಂತರ ಜೆಎಂಎಫ್‌ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.