Mysore
18
few clouds

Social Media

ಬುಧವಾರ, 07 ಜನವರಿ 2026
Light
Dark

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಡಿವೈಎಸ್‌ಪಿ ಅಮಾನತು

ತುಮಕೂರು : ಪೊಲೀಸ್‌ ಠಾಣೆಯಲ್ಲೇ ಮಹಿಳೆಯೊಬ್ಬರನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಎದುರಿಸುತ್ತಿದ್ದ ಮಧುಗಿರಿ ಡಿವೈಎಸ್‌ಪಿ ಎ.ರಾಮಚಂದ್ರಪ್ಪ ಅವರನ್ನು ಶುಕ್ರವಾರ ಅಮಾನತು ಮಾಡಲಾಗಿದೆ.

ಡಿವೈಎಸ್‌ಪಿ ಎ.ರಾಮಚಂದ್ರಪ್ಪ ಲೈಂಗಿಕ ದೌರ್ಜನ್ಯ ನಡೆಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಸಂಬಂಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಿ ಅಶೋಕ್‌ ವರದಿ ಸಲ್ಲಿಸಿದ್ದರು. ಈ ವರದಿಯ ಆಧಾರದ ಮೇಲೆ ಅಮಾನತು ಮಾಡಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಆದೇಶಿಸಿದ್ದಾರೆ.

Tags:
error: Content is protected !!