ರಾಜ್ಯ

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಬೆದರಿಕೆ ಆರೋಪದಡಿ ಉದ್ಯಮಿ ವಿಜಯ್‌ ಟಾಟಾ ದೂರು

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಾಣಿಜೋದ್ಯಮಿ ವಿಜಯ್‌ ಟಾಟಾ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಎಚ್‌.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ಮುಖಂಡ ರಮೇಶ್‌ ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ 50 ಕೋಟಿ ರೂ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ವಿಜಯ್‌ ಟಾಟಾ ಆರೋಪ ಮಾಡಿದ್ದಾರೆ.

ಜೆಡಿಎಸ್‌ ಮುಖಂಡ ರಮೇಶ್‌ ಗೌಡ ನನ್ನ ಮನೆಗೆ ಬಂದಿದ್ದರು. ಬಳಿಕ ನಿಖಿಲ್‌ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದು ತಿಳಿಸಿದರು. ಅದೇ ಸಂದರ್ಭದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರು ದೂರವಾಣಿ ಮೂಲಕ ಸಂಪರ್ಕಿಸಿ ಚುನಾವಣೆಗಾಗಿ 50 ಕೋಟಿ ರೂ. ಹಣ ನೀಡುವಂತೆ ನನ್ನನ್ನು ಕೇಳಿದ್ದರು. ಆದರೆ ನಾನು ಹಣ ಕೊಡಲಾಗದು ಎಂದಿದ್ದಕ್ಕೆ ಕುಮಾರಸ್ವಾಮಿ ಕೋಪಿಸಿಕೊಂಡಿದ್ದರು. ನಂತರ ನಿಮ್ಮ ಯೋಜನೆಯನ್ನು ಸಂಪೂರ್ಣವಾಗಲು ಬಿಡುವುದಿಲ್ಲ ಎಂಬಂತೆ ಬೆದರಿಕೆ ಹಾಕಿದ್ದಾರೆ. ಈಗಾಗಲೇ 2019ರ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರ ಕುಟುಂಬಕ್ಕಾಗಿ ಅನೇಕ ಹಣ ಖರ್ಚು ಮಾಡಿದ್ದೇವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜೆಡಿಎಸ್‌ ಮುಖಂಡ ರಮೇಶ್‌ ಗೌಡ ದೇವಸ್ಥಾನ ಕಟ್ಟಲು 5 ಕೋಟಿ ರೂ. ಹಣ ಕೇಳಿದ್ದರು. ಆದರೆ ಆ ವೇಳೆ ನಾನು ನನಗೆ ತುಂಬಾ ಕಷ್ಟವಿದೆ. ಯಾವುದೇ ಕಾರಣಕ್ಕೂ ಈ ಸಂದರ್ಭದಲ್ಲಿ ಹಣ ನೀಡಲು ಆಗುವುದಿಲ್ಲ ಎಂದು ಹೇಳಿದ್ದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ 1 ವಾರದಿಂದ ರಮೇಶ್‌ ಗೌಡ ಫೋನ್‌ ಕಾಲ್‌ ಮತ್ತು ಸಂದೇಶಗಳನ್ನು ಮಾಡುತ್ತಿದ್ದರು ಎಂದು ದೂರಿನಲ್ಲಿ ವಿಜಯ್‌ ಟಾಟಾ ಉಲ್ಲೇಖಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

6 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

6 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

6 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

8 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

8 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

8 hours ago