ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯದ ಏಳು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲೋಕಾಯುಕ್ತ ಅಧಿಕಾರಿಗಳು ಇಂದು(ಜನವರಿ.31) ರಾಜ್ಯದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆದಿದೆ. ಈ ದಾಳಿಯೂ ಬೆಂಗಳೂರಿನಲ್ಲಿ ಎರಡು ಕಡೆ, ಬೆಳಗಾವಿಯಲ್ಲಿ ಎರಡು ಕಡೆ, ಚಿತ್ರದಯರ್ಗ, ರಾಯಚೂರು ಹಾಗೂ ಬಾಗಲಕೋಟೆಯಲ್ಲಿ ತಲಾ ಒಂದು ಸ್ಥಳಗಳಲ್ಲಿ ನಡೆದಿದ್ದು, ಅಧಿಕೃತ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಇನ್ನೂ ಬೆಂಗಳೂರಿನಲ್ಗಲೊ ಬಿಬಿಎಂಪಿ ಹೆಬ್ಬಾಳ ವ್ಯಾಪ್ತಿಯ ಇಂಜಿನಿಯರಿಂಗ್ ವಿಭಾಗದ ಎಇಇ ಮಾಧವ ರಾವ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಡೆಪ್ಯೂಟಿ ಕಾರ್ಯದರ್ಶಿ ಟಿ.ಕೆ.ರಮೇಶ್ ಅವರ ನಿವಾಸಗಳ ಮೇಲೆ ದಾಳಿ ನಡೆದಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.