Mysore
16
scattered clouds

Social Media

ಬುಧವಾರ, 21 ಜನವರಿ 2026
Light
Dark

ಬಿಹಾರ ಚುನಾವಣೆ ಫಲಿತಾಂಶ ಬಂದ ಬಳಿಕ ಮತಗಳ್ಳತನದ ಆರೋಪ ಮಾಡ್ತಾರೆ: ಆರ್‌.ಅಶೋಕ

ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದರು.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗಿದೆ. ಬಿಹಾರದಲ್ಲಿ ನಕ್ಸಲ್‌ ಚಟುವಟಿಕೆ ಹೆಚ್ಚಿದ್ದರೂ ಈ ಬಾರಿ ಉತ್ತಮವಾಗಿ ಮತದಾನ ನಡೆದಿದೆ. ಅಮಿತ್‌ ಶಾ ಗೃಹ ಸಚಿವರಾದ ಬಳಿಕ ನಕ್ಸಲ್‌ ಚಟುವಟಿಕೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. 12ಕ್ಕೂ ಹೆಚ್ಚು ಸಂಸ್ಥೆಗಳು ಸಮೀಕ್ಷೆ ಮಾಡಿದ್ದು, ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಲಾಗಿದೆ. ಕಾಂಗ್ರೆಸ್‌ನ ಮಹಾಘಟಬಂಧನಕ್ಕೆ ಬೆಂಬಲ ಇಲ್ಲ ಎಂದು ಹೇಳಲಾಗಿದೆ ಎಂದರು.

ಇದನ್ನು ಓದಿ: ನಿನ್ನೆ ನಡೆದ ಬಿಹಾರ ಚುನಾವಣೆಯಲ್ಲೂ ಮತಗಳ್ಳತನ ; ಚುನಾವಣಾ ಆಯೋಗವೇ ಪ್ರಜಾಪ್ರಭುತ್ವದ ಕಗ್ಗೊಲೆ : ರಾಗಾ

ಬಿಹಾರ ಚುನಾವಣೆಯ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನದ ಆರೋಪ ಮಾಡುತ್ತಾರೆ. ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್‌ ಸರಣಿಯಾಗಿ ಸೋಲುತ್ತಿದೆ. ಲೋಕಸಭೆ, ವಿಧಾನಸಭಾ ಚುನಾವಣೆಗಳಲ್ಲಿ ರಾಹುಲ್‌ ಗಾಂಧಿ ಐರನ್‌ ಲೆಗ್‌ ಎಂದು ಪ್ರಸಿದ್ಧಿ ಪಡೆದಿದ್ದಾರೆ. ಬಿಹಾರ ಚುನಾವಣೆಯ ಫಲಿತಾಂಶ ಬಂದ ನಂತರ ಅವರು ವಿದೇಶ ಪ್ರವಾಸಕ್ಕೆ ತೆರಳುತ್ತಾರೆ. ಒಂದು ಕಡೆ ಲೋಕಸಭೆಯಲ್ಲೂ ಅವರು ಕೆಲಸ ಮಾಡುತ್ತಿಲ್ಲ, ಮತ್ತೊಂದು ಕಡೆ ಪಕ್ಷಕ್ಕಾಗಿಯೂ ಕೆಲಸ ಮಾಡುತ್ತಿಲ್ಲ ಎಂದರು.

ದೆಹಲಿಯಲ್ಲಾದ ಬಾಂಬ್‌ ಸ್ಪೋಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ಮೊಬೈಲ್‌ ಕೊಟ್ಟಿದ್ದು ಯಾರು ಎಂದು ತನಿಖೆ ಮಾಡಬೇಕಿದೆ ಅಥವಾ ಮೊಬೈಲ್‌ ಬಳಸಿ ಏನು ಮಾಡಿದ್ದಾರೆ ಎಂದು ತನಿಖೆ ಮಾಡಬೇಕಿತ್ತು. ಆದರೆ ಈ ವೀಡಿಯೋ ಹೊರಗೆ ಬಂದಿದ್ದು ಹೇಗೆ ಎಂದು ತನಿಖೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದಂತೆಯೇ ರಾಜ್ಯ ಸರ್ಕಾರ ಕೂಡ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಸ್ಲಿಮರ ಪರವಾದ ಮೃದುವಾದ ಧೋರಣೆ ಒಳ್ಳೆಯದಲ್ಲ ಎಂದರು.

Tags:
error: Content is protected !!