ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗಿದೆ. ಬಿಹಾರದಲ್ಲಿ ನಕ್ಸಲ್ ಚಟುವಟಿಕೆ ಹೆಚ್ಚಿದ್ದರೂ ಈ ಬಾರಿ ಉತ್ತಮವಾಗಿ ಮತದಾನ ನಡೆದಿದೆ. ಅಮಿತ್ ಶಾ ಗೃಹ ಸಚಿವರಾದ ಬಳಿಕ ನಕ್ಸಲ್ ಚಟುವಟಿಕೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. 12ಕ್ಕೂ ಹೆಚ್ಚು ಸಂಸ್ಥೆಗಳು ಸಮೀಕ್ಷೆ ಮಾಡಿದ್ದು, ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಲಾಗಿದೆ. ಕಾಂಗ್ರೆಸ್‌ನ ಮಹಾಘಟಬಂಧನಕ್ಕೆ ಬೆಂಬಲ ಇಲ್ಲ ಎಂದು ಹೇಳಲಾಗಿದೆ ಎಂದರು.
ಇದನ್ನು ಓದಿ: ನಿನ್ನೆ ನಡೆದ ಬಿಹಾರ ಚುನಾವಣೆಯಲ್ಲೂ ಮತಗಳ್ಳತನ ; ಚುನಾವಣಾ ಆಯೋಗವೇ ಪ್ರಜಾಪ್ರಭುತ್ವದ ಕಗ್ಗೊಲೆ : ರಾಗಾ
ಬಿಹಾರ ಚುನಾವಣೆಯ ಫಲಿತಾಂಶ ಬಂದ ಬಳಿಕ ರಾಹುಲ್ ಗಾಂಧಿ ಮತಗಳ್ಳತನದ ಆರೋಪ ಮಾಡುತ್ತಾರೆ. ರಾಹುಲ್ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಸರಣಿಯಾಗಿ ಸೋಲುತ್ತಿದೆ. ಲೋಕಸಭೆ, ವಿಧಾನಸಭಾ ಚುನಾವಣೆಗಳಲ್ಲಿ ರಾಹುಲ್ ಗಾಂಧಿ ಐರನ್ ಲೆಗ್ ಎಂದು ಪ್ರಸಿದ್ಧಿ ಪಡೆದಿದ್ದಾರೆ. ಬಿಹಾರ ಚುನಾವಣೆಯ ಫಲಿತಾಂಶ ಬಂದ ನಂತರ ಅವರು ವಿದೇಶ ಪ್ರವಾಸಕ್ಕೆ ತೆರಳುತ್ತಾರೆ. ಒಂದು ಕಡೆ ಲೋಕಸಭೆಯಲ್ಲೂ ಅವರು ಕೆಲಸ ಮಾಡುತ್ತಿಲ್ಲ, ಮತ್ತೊಂದು ಕಡೆ ಪಕ್ಷಕ್ಕಾಗಿಯೂ ಕೆಲಸ ಮಾಡುತ್ತಿಲ್ಲ ಎಂದರು.
ದೆಹಲಿಯಲ್ಲಾದ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ಮೊಬೈಲ್ ಕೊಟ್ಟಿದ್ದು ಯಾರು ಎಂದು ತನಿಖೆ ಮಾಡಬೇಕಿದೆ ಅಥವಾ ಮೊಬೈಲ್ ಬಳಸಿ ಏನು ಮಾಡಿದ್ದಾರೆ ಎಂದು ತನಿಖೆ ಮಾಡಬೇಕಿತ್ತು. ಆದರೆ ಈ ವೀಡಿಯೋ ಹೊರಗೆ ಬಂದಿದ್ದು ಹೇಗೆ ಎಂದು ತನಿಖೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದಂತೆಯೇ ರಾಜ್ಯ ಸರ್ಕಾರ ಕೂಡ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಸ್ಲಿಮರ ಪರವಾದ ಮೃದುವಾದ ಧೋರಣೆ ಒಳ್ಳೆಯದಲ್ಲ ಎಂದರು.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…