ಬೆಂಗಳೂರು:ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ಸದಾ ಸಿದ್ದ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದೆ. ರಾಜ್ಯದಿಂದ ಯಾರಾದರೂ ಒಲಂಪಿಕ್ಸ್ ನಲ್ಲಿ ದೇಶಕ್ಕೆ ಒಂದು ಚಿನ್ನ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಕರ್ನಾಟಕ ಒಲಂಪಿಕ್ ಸಂಸ್ಥೆ ಯವನಿಕಾದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು.
ಚಿನ್ನದ ಪದಕ ಪಡೆದವರಿಗೆ 6 ಕೋಟಿ ಹಣ ಮೀಸಲಿಟ್ಟಿದ್ದೀವಿ. ಬೆಳ್ಳಿ ಪದಕ ಪಡೆದವರಿಗೆ 4 ಕೋಟಿ ಹಣ ಇಟ್ಟಿದ್ದೇವೆ. ಆದರೆ ಯಾರೂ ಪದಕ ತರ್ತಾನೇ ಇಲ್ಲ. ದೇಶಕ್ಕೆ ಯಾರಾದರೂ ಚಿನ್ನ ತನ್ನಿ ಎಂದು ಕರೆ ನೀಡಿದರು.
ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು ಎನ್ನುವ ಪ್ರೋತ್ಸಾಹದಾಯಕ ಉದ್ದೇಶದಿಂದ ಕರ್ನಾಟಕ ಒಲಂಪಿಕ್ ಸಂಸ್ಥೆ 22 ವರ್ಷಗಳಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ.
ಗೋವಿಂದರಾಜು ಅವರು ಒಲಂಪಿಕ್ ಸಂಸ್ಥೆ ಅಧ್ಯಕ್ಷರಾಗಿ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ನಿರಂತರ ಶ್ರಮಿಸುತ್ತಿದ್ದಾರೆ. ನಾನು ಬಜೆಟ್ ರೂಪಿಸುವಾಗ ಚರ್ಚೆಯಲ್ಲಿ ಕುಳಿತು ಕ್ರೀಡಾಕ್ಷೇತ್ರಕ್ಕೆ ಅಗತ್ಯವಾದ ಎಲ್ಲವನ್ನೂ ಸೇರಿಸುತ್ತಾರೆ. ನಾನು ಕ್ರೀಡಾಪಟು ಅಲ್ಲದಿದ್ದರೂ ಕ್ರೀಡಾಪ್ರೇಮಿ. ನಾನು ಶಾಲಾ, ಕಾಲೇಜಿನಲ್ಲಿ ಎಲ್ಲಾ ಕ್ರೀಡೆಗಳಲ್ಲೂ ಭಾಗವಹಿಸುತ್ತಿದ್ದೆ. ಒಂದೂ ಪ್ರಶಸ್ತಿ ಬರಲಿಲ್ಲ. ಆದರೆ ಶಾಸಕರ ಕ್ರೀಡಾಕೂಟದಲ್ಲಿ ಸಿಕ್ಕಾಪಟ್ಟೆ ಪ್ರಶಸ್ತಿ ಬಂತು ಎಂದು ಸ್ಮರಿಸಿದರು.
ಕ್ರೀಡೆಯಲ್ಲಿ ಸಣ್ಣ ಪುಟ್ಟ ದೇಶಗಳೆಲ್ಲಾ ಬಹಳ ಮುಂದಿವೆ. ಆದರೆ, ಭಾರತದಂತಹ ದೊಡ್ಡ ದೇಶಕ್ಕೆ ಒಲಂಪಿಕ್ ನಲ್ಲಿ ಒಂದೂ ಚಿನ್ನ ಬರಲಿಲ್ಲ ಎನ್ನುವುದು ಬೇಸರದ ಸಂಗತಿ ಎಂದರು.
ಹೀಗಾಗಿ ನಾನು ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಇರುವ ಎಲ್ಲಾ ಅನುಕೂಲ ಕಲ್ಪಿಸಿಕೊಡಲು ನಾನು ಸಿದ್ಧ. ರಾಜ್ಯದ ಪಟುಗಳು ದೇಶಕ್ಕೆ ಒಲಂಪಿಕ್ಸ್ ನಲ್ಲಿ ಚಿನ್ನ ತರಲಿ ಎಂದು ಆಶಿಸಿದರು.
ಗೃಹ ಸಚಿವ ಜಿ.ಪರಮೇಶ್ವರ್, ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷರೂ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಸೇರಿ ಇಲಾಖೆಯ ಅಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
25% ಹಾಜರಾತಿ-10 ಗ್ರೇಸ್ ಮಾರ್ಕ್ ಬಗ್ಗೆ ಪರಿಶೀಲನೆ: ಸಿಎಂ ಭರವಸೆ
ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಒಲಂಪಿಕ್ ಸಂಸ್ಥೆ ಅಧ್ಯಕ್ಷರಾದ ಗೋವಿಂದರಾಜು ಅವರು ಶಾಲಾ ಮಕ್ಕಳು ಕ್ರೀಡೆಯಲ್ಲಿ ಹೆಚ್ಚೆಚ್ಚು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಕ್ರೀಡಾ ಮಕ್ಕಳಿಗೆ ಶೇ25 ರಷ್ಡು ಹಾಜರಾತಿ ಮತ್ತು 10 ಗ್ರೇಸ್ ಮಾರ್ಕ್ ನೀಡುವಂತೆ ನಿಯಮ ರೂಪಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಈ ಬಗ್ಗೆ ಪ್ರಸ್ತಾಪಿಸಿದ ಸಿಎಂ, ಈ ಬೇಡಿಕೆಗಳು ನ್ಯಾಯೋಚಿತವಾಗಿವೆ. ಈ ಬಗ್ಗೆ ಗಂಭೀರವಾಗಿ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…
ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…
ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…
ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…
ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ…
ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…