ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎನ್ನಲಾದ ಅಶ್ಲೀಲ ವಿಡೀಯೋ ಕುರಿತು ಪೆನ್‌ಡ್ರೈವ್ ಹಂಚಿಕೆ ಹಿಂದೆ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿರುವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ನಾನು ಅಂತಾ ಚೀಪ್ ಕೆಲಸಕ್ಕೆ ಇಳಿಯಲ್ಲ. ನಾನೇನು ನನ್ನ ಬಳಿ ಪೆನ್‌ಡ್ರೈವ್ ಇದೆ ಎಂದು ಹೆದರಿಸಿದ್ದನಾ, ಇಂತಹ ಕೆಲಸ ನಮಗೆ ಅನವಶ್ಯಕ. ಚುನಾವಣೆಯನ್ನು ಎದುರಿಸುತ್ತೇವೆ, ನೇರವಾಗಿ ಅಸಂಬ್ಲಿಯಲ್ಲಿ ಚರ್ಚೆ ಮಾಡುತ್ತೇನೆ. ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನು ಭಗವಂತನೂ ಕ್ಷಮಿಸಲ್ಲ ಎಂದು ವಾಗ್ದಾಳಿ ನಡೆಸಿದರು.
ಇಂದಿನಿಂದಲ್ಲ, ಬಹಳ ವರ್ಷಗಳಿಂದಲೂ ಎಚ್.ಡಿ ಕುಮಾರಸ್ವಾಮಿ ಮತ್ತು ಕುಟುಂಬದವರಿಗೆ ನನ್ನನ್ನು ನೆನಪಿಸಿಕೊಂಡಿಲ್ಲ ಅಂದ್ರೆ ನಿದ್ದೆ ಬರಲ್ಲ. ಪ್ರಜ್ವಲ್ ಪ್ರಕರಣದಲ್ಲಿ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಪೆನ್ ಡ್ರೈವ್ ಪ್ರಕರಣವನ್ನು ಎಸ್‌ಐಟಿ ತನಿಖೆ ನಡೆಸುತ್ತಿದೆ. ಕಾನೂನು ಪ್ರಕಾರ ಎಲ್ಲವೂ ನಡೆಯಲಿದೆ ಎಂದರು.
ಪ್ರಜ್ವಲ್ ವಿದೇಶಕ್ಕೆ ಹೋಗುವಾಗ ಜೊತೆ ಇದ್ದವರು ಯಾರು? ಯಾರು ಯಾರಿಗೆ ಕರೆ ಮಾಡಿದ್ರು ಕೇಳಿ ಅವರಿಗೆ ಎಂದು ಎಚ್.ಡಿ ಕುಮಾರಸ್ವಾಮಿಗೆ, ಡಿಸಿಎಂ ಟಾಂಗ್ ಕೊಟ್ಟರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…