Mysore
22
clear sky

Social Media

ಶನಿವಾರ, 18 ಏಪ್ರಿಲ 2026
Light
Dark

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು ಸಾಮಾಜಿಕ ಸೇನಾನಿಗಳಿಗೆ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರ 135ನೇ ಜಯಂತಿ ಸಮಾರಂಭದಲ್ಲಿ 1970ರ ದಶಕದಿಂದಲೂ ಸಾಮಾಜಿಕ ಹೋರಾಟಗಾರರಾದ ಮಂಗ್ಳೂರು ವಿಜಯ, ಸಿ.ಎಂ. ಮುನಿಯಪ್ಪ, ಎಚ್.ಎನ್. ಅಣ್ಣಯ್ಯ, ಹನುಮಂತರಾವ್ ಬಿ ದೊಡ್ಡಮನಿ ಮತ್ತು ಶೋಭಾ ಗಸ್ತಿ ಅವರಿಗೆ ಅಂಬೇಡ್ಕರ್ ಪ್ರಶಸ್ತಿಯನ್ನು ವಿತರಿಸಲಾಯಿತು. ಪ್ರಶಸ್ತಿಯು ತಲಾ 5 ಲಕ್ಷ ರೂ. ನಗದು, 20 ಗ್ರಾಂ ಚಿನ್ನ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.

Tags:
error: Content is protected !!