ಬೆಂಗಳೂರು: ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಗುರುವಾರ(ಆ.8) ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಯಾವುದೇ ಜಾತಿ, ಧರ್ಮ,ಭಾಷೆ, ಪ್ರದೇಶಗಳಿಗೆ ಸೇರಿದ ಎಲ್ಲ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ರವರ ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಲಾಗಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದಾಗಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ರವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ. ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ ಎಂದರು.
ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್ ಆದ ಕಬ್ಬನ್ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…
13 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…
ಕುವೈತ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್ ಮಿಶಾಲ್…
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…