ರಾಜ್ಯ

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದ್ದರಲ್ಲದೇ, ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ, ಮಹಾ ಮಾನವತಾವಾದಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿ. ಅವರು ದೇಶಕ್ಕೆ ಎಂಥ ಸಂವಿಧಾನದ ಅಗತ್ಯವಿದೆ ಎಂದು ಚಿಂತಿಸಿ, ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ ದೇಶಕ್ಕೆ ಅಗತ್ಯವಿರುವ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ. ನಮ್ಮ ಸರ್ಕಾರ ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಬೋಧಿಸಲಾಗುತ್ತಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ ಎಂದರು.

ಪರಿನಿರ್ವಾಣ ದಿನದಂದು ನಾವು ಅಂಬೇಡ್ಕರ್ ಅವರನ್ನು ಸ್ಮರಿಸುವ ಕೆಲಸವನ್ನು ಮಾಡಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದು ಹೇಳಿದ್ದರು ಎಂದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದರು ಎಂದರು.

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಭಗವದ್ಗೀತೆಯನ್ನು ಪಠ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಬಗ್ಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಮನುವಾದಿಗಳಾಗಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

13 mins ago

ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…

1 hour ago

ನಾಲ್ಕೈದು ದಿನಗಳ ನಂತರ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…

2 hours ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

3 hours ago

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…

3 hours ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

3 hours ago