ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದ್ದರಲ್ಲದೇ, ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ, ಮಹಾ ಮಾನವತಾವಾದಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್ ಜಾರಕಿಹೊಳಿ
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿ. ಅವರು ದೇಶಕ್ಕೆ ಎಂಥ ಸಂವಿಧಾನದ ಅಗತ್ಯವಿದೆ ಎಂದು ಚಿಂತಿಸಿ, ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ ದೇಶಕ್ಕೆ ಅಗತ್ಯವಿರುವ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ. ನಮ್ಮ ಸರ್ಕಾರ ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಬೋಧಿಸಲಾಗುತ್ತಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ ಎಂದರು.
ಪರಿನಿರ್ವಾಣ ದಿನದಂದು ನಾವು ಅಂಬೇಡ್ಕರ್ ಅವರನ್ನು ಸ್ಮರಿಸುವ ಕೆಲಸವನ್ನು ಮಾಡಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದು ಹೇಳಿದ್ದರು ಎಂದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದರು ಎಂದರು.
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಭಗವದ್ಗೀತೆಯನ್ನು ಪಠ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಬಗ್ಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಮನುವಾದಿಗಳಾಗಿದ್ದಾರೆ ಎಂದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…