Mysore
24
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಇಂದಿನಿಂದ ಆಗಸ್ಟ್‌ 19 ವರೆಗೆ ಅಂಬೇಡ್ಕರ್‌ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 8 ರಿಂದ 19 ವರೆಗೆ ಲಾಲ್‌ಬಾಗ್‌ನಲ್ಲಿ ಏರ್ಪಡಿಸಲಾಗಿದೆ.

ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಬಾಬಾ ಸಾಹೇಬ್‌ ಅಂಬೇಡ್ಕರ್ ರವರ ಜೀವನಸಾಧನೆ, ದೇಶಕ್ಕೆ ನೀಡದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌದ್ಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಮಹತ್ವದ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಪ್ರದರ್ಶವನ್ನು ಏರ್ಪಡಿಸಲಾಗಿದೆ.

ಸುಮಾರು 6 ಲಕ್ಷ ಹೂಗಳಿಂದ ಸಂಸತ್‌ ಭವನವನ್ನು ನಿರ್ಮಾಣ ಮಾಡಲಾಗಿದ್ದು, 3.4ಲಕ್ಷ ಡಚ್‌ ಗುಲಾಬಿ ಹೂಗಳನ್ನ ಬಳಸಲಾಗಿದ್ದು, ಅಂಬೇಡ್ಕರ್‌ ಅವರ ಪ್ರತಿಕೃತಿ ಹಾಗೂ ಚೈತನ್ಯ ಭೂಮಿ ನಿರ್ಮಾಣಕ್ಕೆ ವಿವಿಧ ಬಗೆಯ ಹೂಗಳನ್ನು ಬಳಸಲಾಗಿದೆ.

ಫಲಪುಷ್ಪ ಪ್ರದರ್ಶನಕ್ಕೆ 12 ಲಕ್ಷ ಜನ ಆಗಮಿಸುವ ನಿರೀಕ್ಷೆ

ತೋಟಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಈ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ.

Tags: