ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 8 ರಿಂದ 19 ವರೆಗೆ ಲಾಲ್‌ಬಾಗ್‌ನಲ್ಲಿ ಏರ್ಪಡಿಸಲಾಗಿದೆ.
ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜೀವನಸಾಧನೆ, ದೇಶಕ್ಕೆ ನೀಡದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌದ್ಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಮಹತ್ವದ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಪ್ರದರ್ಶವನ್ನು ಏರ್ಪಡಿಸಲಾಗಿದೆ.
ಸುಮಾರು 6 ಲಕ್ಷ ಹೂಗಳಿಂದ ಸಂಸತ್ ಭವನವನ್ನು ನಿರ್ಮಾಣ ಮಾಡಲಾಗಿದ್ದು, 3.4ಲಕ್ಷ ಡಚ್ ಗುಲಾಬಿ ಹೂಗಳನ್ನ ಬಳಸಲಾಗಿದ್ದು, ಅಂಬೇಡ್ಕರ್ ಅವರ ಪ್ರತಿಕೃತಿ ಹಾಗೂ ಚೈತನ್ಯ ಭೂಮಿ ನಿರ್ಮಾಣಕ್ಕೆ ವಿವಿಧ ಬಗೆಯ ಹೂಗಳನ್ನು ಬಳಸಲಾಗಿದೆ.
ಫಲಪುಷ್ಪ ಪ್ರದರ್ಶನಕ್ಕೆ 12 ಲಕ್ಷ ಜನ ಆಗಮಿಸುವ ನಿರೀಕ್ಷೆ
ತೋಟಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಈ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…