ಬೆಂಗಳೂರು: ಲೋಕಸಭೆ ಚುನಾವಣೆ ಗೆಲ್ಲಲು ರಣತಂತ್ರ ರೂಪಿಸಲು ರಾಜ್ಯ ರಾಜಾಧಾನಿಗೆ ಬಂದಿಳಿದಿರುವ ಕೇಂದ್ರ ಗೃಹಮಂತ್ರಿ ಅಮಿತ್ ಶಾ, ಇಂದು (ಏ.2) ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಜತೆ ಸಭೆ ನಡೆಸಿದರು.
ರಾಜ್ಯ ಬಿಜೆಪಿ-ಜೆಡಿಎಸ್ ನಾಯಕರಿಗೆ ಅಮಿತ್ ಶಾ ಒಂದಷ್ಟು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಬಂಡಾಯ ಇರುವ ಕ್ಷೇತ್ರ ನಾಯಕರ ಜೊತೆಗೆ ಸಭೆ ಮಾಡಿದ್ದು, ಎಲ್ಲರೂ ಒಟ್ಟಾಗಿ ಚುನಾವಣೆಯಲ್ಲಿ ಕೆಲಸ ಮಾಡಬೇಕೆಂದು ಬಂಡಾಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಅದರಲ್ಲೂ ಮುಖ್ಯವಾಗಿ ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಇದ್ದ ಬಂಡಾಯವನ್ನು ಅಮಿತ್ ಶಾ ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಈ ನಾಲ್ಕು ಕ್ಷೇತ್ರಗಳಲ್ಲಿ 2 ಲಕ್ಷ ಮತಗಳ ಅಂತರದಲ್ಲಿ ಗೇಲ್ಲಬೇಕು ಎಂದು ನಾಯಕರುಗಳಿಗೆ ಅಮಿತ್ ಶಾ ಗೆಲುವಿನ ಗುರಿ ನೀಡಿದ್ದಾರೆ.
ಮತದಾನ ದಿನದಂದು ಜೆಡಿಎಸ್‌ನವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮತ ಹಾಕಿಸಿ. ಸಣ್ಣ ವಿಷಯಗಳನ್ನು ದೊಡ್ಡದು ಮಾಡಬೇಡಿ ಎಂದಿದ್ದಾರೆ. ಈ ಸೂಚನೆಯಂತೆ ಬಂಡಾಯ ನಾಯಕರು ಸಹ ಮೋದಿ ಮತ್ತು ದೇಶಕ್ಕಾಗಿ ಈ ಚುನಾವಣೆಯಲ್ಲಿ ಪಕ್ಷದ ಪರ ಕೆಲಸ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…