ರಾಜ್ಯ

ಬಿಜೆಪಿ ಬಂಡಾಯ ನಾಯಕರಿಗೆ ಖಡಕ್‌ ಸೂಚನೆ ಕೊಟ್ಟ ಚುನಾವಣಾ ಚಾಣಕ್ಯ

ಬೆಂಗಳೂರು: ಲೋಕಸಭೆ ಚುನಾವಣೆ ಗೆಲ್ಲಲು ರಣತಂತ್ರ ರೂಪಿಸಲು ರಾಜ್ಯ ರಾಜಾಧಾನಿಗೆ ಬಂದಿಳಿದಿರುವ ಕೇಂದ್ರ ಗೃಹಮಂತ್ರಿ ಅಮಿತ್‌ ಶಾ, ಇಂದು (ಏ.2) ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಜತೆ ಸಭೆ ನಡೆಸಿದರು.

ರಾಜ್ಯ ಬಿಜೆಪಿ-ಜೆಡಿಎಸ್‌ ನಾಯಕರಿಗೆ ಅಮಿತ್‌ ಶಾ ಒಂದಷ್ಟು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಬಂಡಾಯ ಇರುವ ಕ್ಷೇತ್ರ ನಾಯಕರ ಜೊತೆಗೆ ಸಭೆ ಮಾಡಿದ್ದು, ಎಲ್ಲರೂ ಒಟ್ಟಾಗಿ ಚುನಾವಣೆಯಲ್ಲಿ ಕೆಲಸ ಮಾಡಬೇಕೆಂದು ಬಂಡಾಯ ನಾಯಕರಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಅದರಲ್ಲೂ ಮುಖ್ಯವಾಗಿ ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಇದ್ದ ಬಂಡಾಯವನ್ನು ಅಮಿತ್‌ ಶಾ ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಈ ನಾಲ್ಕು ಕ್ಷೇತ್ರಗಳಲ್ಲಿ 2 ಲಕ್ಷ ಮತಗಳ ಅಂತರದಲ್ಲಿ ಗೇಲ್ಲಬೇಕು ಎಂದು ನಾಯಕರುಗಳಿಗೆ ಅಮಿತ್‌ ಶಾ ಗೆಲುವಿನ ಗುರಿ ನೀಡಿದ್ದಾರೆ.

ಮತದಾನ ದಿನದಂದು ಜೆಡಿಎಸ್‌ನವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮತ ಹಾಕಿಸಿ. ಸಣ್ಣ ವಿಷಯಗಳನ್ನು ದೊಡ್ಡದು ಮಾಡಬೇಡಿ ಎಂದಿದ್ದಾರೆ. ಈ ಸೂಚನೆಯಂತೆ ಬಂಡಾಯ ನಾಯಕರು ಸಹ ಮೋದಿ ಮತ್ತು ದೇಶಕ್ಕಾಗಿ ಈ ಚುನಾವಣೆಯಲ್ಲಿ ಪಕ್ಷದ ಪರ ಕೆಲಸ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

7 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

8 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

9 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

11 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

15 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

15 hours ago