ಕೋಲಾರ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಾಲೂರಿನಲ್ಲಿ ಇಂದು ಶಾಸಕ ನಂಜೇಗೌಡರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದರು.
ದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ತಮ್ಮ ಬದುಕನ್ನೇ ಅರ್ಪಿಸಿದ ಕಾಂಗ್ರೆಸ್ ನಾಯಕರ ತ್ಯಾಗ, ಬಲಿದಾನವನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಶಾಸಕರಾದ ಶ್ರೀನಿವಾಸಗೌಡ, ನಜೀರ್ ಅಹಮದ್, ಅನಿಲ್ ಕುಮಾರ್, ಕೆಪಿಸಿಸಿ ಉಪಾಧ್ಯಕ್ಷ ನಾರಾಯಣಸ್ವಾಮಿ ಸೇರಿದಂತೆ ಮತ್ತಿತರ ನಾಯಕರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.