Mysore
24
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಎಲ್ಲರನ್ನು ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ: ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಲು ಯತ್ನಾಳ್‌ ತಂಡದ ಜೊತೆ ಪ್ರತ್ಯೇಕ ಸಭೆ ನಡೆಸಿರುವ ವಿಚಾರವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದ್ದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರನ್ನೂ ಒಂದು ಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ ಎಂದು ಸ್ಪಷ್ಟಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಪಕ್ಷದಲ್ಲಿನ ಭಿನ್ನಮತವನ್ನು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಬಗೆಹರಿಸಬೇಕು. ವರಿಷ್ಠರು ಕೂಡಲೇ ಕರ್ನಾಟಕದ ಪಕ್ಷದ ಬೆಳವಣಿಗೆಯ ಬಗ್ಗೆ ಗಮನವನ್ನು ಹರಿಸಿ, ಎಲ್ಲಾ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ. ಆದರೆ ಪಕ್ಷದಲ್ಲಿ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ನಡೀತಿರೋದು ಅತ್ಯಂತ ದುರದೃಷ್ಟಕರ ಎಂದು ಅಭಿಪ್ರಾಯಪಟ್ಟರು.

ಇನ್ನು ಕೂಡಲೇ ಪಕ್ಷದ ವರಿಷ್ಠರು ಕರ್ನಾಟಕದ ಬೆಳವಣಿಗೆಯ ಬಗ್ಗೆ ಗಮನ ಹರಿಸಿ ಎಲ್ಲಾ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

Tags:
error: Content is protected !!