ಬೆಳಗಾವಿ: ಶೈಕ್ಷಣಿಕ ವಾತಾವರಣ ಉತ್ತಮಗೊಳಿಸಲು ಪ್ರತೀ 10-20ಕಿ.ಮೀಗೆ ಒಂದು ಪದವಿ ಪೂರ್ವ ಕಾಲೇಜು ಮಂಜೂರು ಮಾಡುವ ಬಗ್ಗೆ ಪರಿಗಣಿಸಲಾಗಿದೆ ಎಂದು ಪ್ರಾರ್ಥಮಿಕ ಹಾಗೂ ಪೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಶೈಕ್ಷಣಿಕ ವಾತಾವರಣ ಉತ್ತಮಗೊಳಿಸಲು ಖಾಸಗಿ ಕಾಲೇಜುಗಳನ್ನು ಆರಂಭ ಮಾಡಲು ಮಾನದಂಡ ರೂಪಿಸಲಾಗಿದೆ. ಈ ಮೂಲಕ ಒರೌಢಶಾಲೆಗಳನ್ನು ಪದವಿಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ 47 ಹಿರಿಯ ಪ್ರಾರ್ಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಿದೆ. ಸರ್ಕಾರಿ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಯಾವುದೇ ನಿಖರವಾದ ಮಾನದಂಡಗಳು ಇಲ್ಲ ಎಂದು ತಿಳಿಸಿದ್ದಾರೆ.





