Mysore
21
broken clouds

Social Media

ಸೋಮವಾರ, 15 ಜೂನ್ 2026
Light
Dark

ಮಾರ್ಚ್‌.22ಕ್ಕೆ ಕರ್ನಾಟಕ ಬಂದ್|‌ ಅಂದು ಸರ್ಕಾರಿ ಬಸ್‌ಗಳು ಸಂಚರಿಸಲಿವೆ: ಅನಂತ ಸುಬ್ಬುರಾವ್‌

ಬೆಂಗಳೂರು: ಶಿವಸೇನೆ ಮತ್ತು ಎಂಇಎಸ್‌ ನಿಷೇಧಕ್ಕೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್‌ಗೆ ರಾಜ್ಯ ಸಾರಿಗೆ ಸಂಸ್ಥೆಯ ಬೆಂಬಲವಿಲ್ಲ. ಅಂದು ಬಸ್‌ಗಳು ಸಂಚರಿಸಲಿವೆ ಎಂದು ಕಾರ್ಮಿಕ ಸಂಘದ ಮುಖಂಡ ಅನಂತ ಸುಬ್ಬುರಾವ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾತನಾಡಿದ ಅವರು, ಮಾರ್ಚ್‌.22 ರಂದು ಕರ್ನಾಟಕ ಬಂದ್‌ ಇರಲಿದೆ. ಆದರೆ ಈ ಬಂದ್‌ಗೆ ಕೆಎಸ್‌ಆರ್‌ಟಿಸಿ ಸಂಸ್ಥೆಯ ಬೆಂಬಲವಿಲ್ಲ. ಹಾಗಾಗಿ ಸರ್ಕಾರಿ ಬಸ್‌ ಸಂಚಾರ ಇರಲಿದೆ ಎಂದರು.

ರಾಜ್ಯ ಸರ್ಕಾರಿ ನೌಕರರು ಶನಿವಾರ ಕರ್ತವ್ಯಕ್ಕೆ ಹಾಜರಾಗಲಿದ್ದು, ಕೆಎಸ್‌ಆರ್‌ಟಿಸಿ, ಕಲ್ಯಾಣ ಕರ್ನಾಟಕ ಭಾಗದ ಸಾರಿಗೆ, ವಾಯುವ್ಯ ಸಾರಿಗೆ ಹಾಗೂ ಬಿಎಂಟಿಸಿ ಬಸ್‌ಗಳು ಸಂಚಾರ ಮಾಡಲಿವೆ ಎಂದು ಹೇಳಿದರು.

Tags:
error: Content is protected !!