ಬೆಂಗಳೂರು: ಇಂದಿರಾನಗರ ಸ್ಪಾ ವ್ಯವಸ್ಥಾಪಕನಿಗೆ ಬೆದರಿಸಿ ೧೫ ಲಕ್ಷ ರೂ ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ಖಾಸಗಿ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ ಸೇರಿ ಇಬ್ಬರನ್ನು ಜೆ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ.
ಖಾಸಗಿ ಸುದ್ದಿವಾಹಿನಿಯ ಸಿಇಓ ರಾಜಾನುಕುಂಟೆ ವೆಂಕಟೇಶ್ ಹಾಗೂ ನಿರೂಪಕಿ ದಿವ್ಯಾ ವಸಂತಾ ಸೋದರ ಸಂದೇಶ್ ಬಂಧಿತರಾಗಿದ್ದು, ಆರೋಪಿಗಳಿಂದ ೩ ಮೊಬೈಲ್ ಜಪ್ತಿ ಮಾಡಲಾಗಿದೆ.
ಕೃತ್ಯ ಬೆಳಕಿಗೆ ಬಂದ ನಂತರ ನಿರೂಪಕಿ ದಿವ್ಯಾ ವಸಂತ ನಾಪತ್ತೆಯಾಗಿದ್ದು, ಸಚಿನ್ ಹಾಗೂ ಆಕಾಶ್ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇತ್ತೀಚೆಗೆ ಇಂದಿರಾನಗರದ ೧೦೦ ಅಡಿ ರಸ್ತೆ ೧೫ನೇ ಮುಖ್ಯರಸ್ತೆಯಲ್ಲಿರುವ ಬ್ಯೂಟಿ ಪಾರ್ಲರ್‌ನ ವ್ಯವಸ್ಥಾಪಕ ಶಿವಶಂಕರ್ ಅವರಿಗೆ ವೇಶ್ಯಾವಾಟಿಕೆ ನಡೆದಿದೆ ಎಂದು ಬೆದರಿಸಿ ಹಣ ಸುಲಿಗೆ ಮಾಡಲು ವೆಂಕಟೇಶ್ ತಂಡ ಯತ್ನಿಸಿತ್ತು. ಈ ಬಗ್ಗೆ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಸಿಇಓ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಸುಲಿಗೆ ಕೃತ್ಯಗಳಿಗೆ ವಾಟ್ಸ್ ಆಪ್‌ನಲ್ಲಿ ಸೈ ರಿಸರ್ಚ್ ಟೀಂ ಹೆಸರಿನ ಗ್ರೂಪ್‌ನ್ನು ವೆಂಕಟೇಶ್ ಹಾಗೂ ದಿವ್ಯಾ ಮಾಡಿಕೊಂಡಿದ್ದರು. ಈ ಗ್ರೂಪ್‌ನಲ್ಲಿ ತಮ್ಮ ಕಾರ್ಯಸೂಚಿಗಳ ಬಗ್ಗೆ ಆರೋಪಿಗಳು ಚರ್ಚಿಸುತ್ತಿದ್ದರು ಎಂದು ಮೂಲಗಳು ಹೇಳಿವೆ.
ಖಾಸಗಿ ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿದ್ದ ದಿವ್ಯಾ ಆರು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದಳು. ಅಲ್ಲದೇ ಇನ್ಸ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ, ರೀಲ್ಸ್‌ಗಳ ಮೂಲಕ ಆಕೆ ಖ್ಯಾತಿ ಪಡೆದಿದ್ದಳು. ಖಾಸಗಿ ಸುದ್ದಿವಾಹಿನಿಯಲ್ಲಿ ಆಕೆಗೆ ೧೫ ಸಾವಿರ ಸಂಬಳ ಇದ್ದರೆ, ಮನರಂಜನಾ ವಾಹಿನಿಯಲ್ಲಿ ಹಾಸ್ಯ ಕಾರ್ಯಕ್ರಮದಲ್ಲಿ ನಟಿಸುತ್ತಿದ್ದರು. ಆಕೆಗೆ ವಾರಕ್ಕೆ ೬ ರಿಂದ ೭ ಸಾವಿರ ರೂ ಸಂಭಾವನೆ ಸಿಗುತ್ತಿತ್ತು. ಐಷಾರಾಮಿ ಜೀವನಕ್ಕೆ ಬಿದ್ದಿದ್ದ ದಿವ್ಯಾ ಸಲಭವಾಗಿ ಹಣ ಸಂಪಾದಿಸಲು ಅಡ್ಡ ಮಾರ್ಗ ತುಳಿದು ಸಂಕಷ್ಟಕ್ಕೆ ತುತ್ತಾಗಿದ್ದಾಳೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…
ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…
ವಾಷಿಂಗ್ಟನ್: ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್,…
ವಾಷಿಂಗ್ಟನ್: ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ದೇಶವನ್ನು…
ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…