ರಾಜ್ಯ

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌

ಬೆಂಗಳೂರು: ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ಅವರಿಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಅರಣ್ಯ ಇಲಾಖೆ ಸಭೆ ಆಯೋಜಿಸಿದ್ದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ಅವರು ಬೆಂಗಳೂರಿಗೆ ಆಗಮಿಸಿದ್ದರು.

ಸಭೆ ಆರಂಭವಾಗುವುದಕ್ಕೂ ಮುಂಚೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಸಚಿವರಾದ ಜಮೀರ್‌ ಅಹಮ್ಮದ್‌ ಖಾನ್‌ರನ್ನು ಸಹ ಪವನ್‌ ಕಲ್ಯಾಣ್‌ ಭೇಟಿಯಾಗಿದ್ದರು.

ಡಿಸಿಎಂ ಆಗಿ ರಾಜಕೀಯ ಜಂಜಾಟದಲ್ಲಿರುವ ಪವನ್‌ ಕಲ್ಯಾಣ್‌ಗೆ ಸಿನಿಮಾದ ಹಲವು ಪ್ರಾಜೆಕ್ಟ್‌ಗಳು ಕೈ ಸೇರಿವೆ ಎನ್ನಲಾಗಿದ್ದು, ಹಲವು ಚಿತ್ರಗಳನ್ನು ಈಗ ಪವನ್‌ ಕಲ್ಯಾಣ್‌ ಪೂರ್ಣಗೊಳಿಸಬೇಕಿದೆ.

ಇಂದು ಸಿಎಂ ಸಿದ್ದರಾಮಯ್ಯರ ಭೇಟಿ ಸೌಹಾರ್ದಯುತವಾಗಿದ್ದು, ಯಾವುದೇ ರಾಜಕೀಯ ಇಲ್ಲ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

‘ಶಕ್ತಿ’ ಸ್ಕೀಮ್‌ನಿಂದ ಸಾರಿಗೆ ನಿಗಮಗಳಿಗೆ ನಿಶ್ಶಕ್ತಿ!

ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…

1 second ago

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

5 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

5 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

5 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

14 hours ago