Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಭಾರೀ ಅಭಿವೃದ್ಧಿಯತ್ತ ಸಾಗುತ್ತಿದೆ ಆಂಧ್ರಪ್ರದೇಶ: ಅತ್ಯಾಧುನಿಕ ಸಿನಿಮಾ ಸ್ಟುಡಿಯೋ ನಿರ್ಮಿಸಲು ಚಿಂತನೆ

ಆಂಧ್ರಪ್ರದೇಶ: ನೆರೆಯ ಆಂಧ್ರ ಪ್ರದೇಶದಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಬೃಹತ್‌ ಸಿನಿಮಾ ಸ್ಟುಡಿಯೋ ನಿರ್ಮಿಸಲು ಆಂಧ್ರ ಪ್ರದೇಶ ಸರ್ಕಾರ ಯೋಜನೆ ರೂಪಿಸಿದೆ.

ಫಿಲಂ ಸಿಟಿ ನಿರ್ಮಾಣ ಮಾಡುವ ಮಾತುಕತೆ ನಡೆಯುತ್ತಿರುವ ಬೆನ್ನಲ್ಲೇ ಆಂಧ್ರ ಸರ್ಕಾರ ಅತ್ಯಾಧುನಿಕ ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಮಹತ್ವದ ಘೋಷಣೆ ಮಾಡಿದೆ.

ಇದಕ್ಕಾಗಿ 100 ಎಕರೆ ಸ್ಥಳವನ್ನು ಗುರುತಿಸಲಾಗಿದ್ದು, ಇದರ ಹಿಂದೆ ಡಿಸಿಎಂ ಪವನ್‌ ಕಲ್ಯಾಣ್‌ ಶ್ರಮ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂಧ್ರಪ್ರದೇಶದ ರಾಜಧಾನಿ ಅಮರಾವತಿ ಸನಿಹದಲ್ಲಿ 100 ಎಕರೆ ಜಾಗವನ್ನು ಗುರುತಿಸಲಾಗಿದ್ದು, ಅಲ್ಲಿ ಅತ್ಯಾಧುನಿಕ ಸೌಕರ್ಯಗಳನ್ನು ಹೊಂದಿರುವ ಬಲು ಅದ್ಧೂರಿಯಾದ ಸಿನಿಮಾ ಸ್ಟುಡಿಯೋ ನಿರ್ಮಾಣ ಆಗಲಿದೆ.

ಆಂಧ್ರದಲ್ಲಿ ಸಿನಿಮಾ ಕಾರ್ಯಗಳಿಗೆ ಒತ್ತು ನೀಡಲೆಂದೇ ಈಗ ಬೃಹತ್‌ ಸಿನಿಮಾ ಸ್ಟುಡಿಯೋ ನಿರ್ಮಾಣ ಮಾಡಲು ಆಂಧ್ರ ಸರ್ಕಾರ ಮುಂದಾಗಿದೆ.

ಇನ್ನು ಈ ಬಾರಿಯ ಕೇಂದ್ರ ಬಜೆಟ್‌ನಲ್ಲೂ ಕೂಡ ಆಂಧ್ರಪ್ರದೇಶಕ್ಕೆ ಬಂಪರ್‌ ಆಫರ್‌ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಅಭಿವೃದ್ಧಿ ಕಾರ್ಯಗಳತ್ತ ಮಹತ್ವದ ಹೆಜ್ಜೆ ಹಾಕಿದ್ದು, ಎಲ್ಲರನ್ನು ಆಶ್ಚರ್ಯ ಚಕಿತಗೊಳಿಸಿದೆ.

Tags: