ಆಂಧ್ರಪ್ರದೇಶ: ನೆರೆಯ ಆಂಧ್ರ ಪ್ರದೇಶದಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಬೃಹತ್ ಸಿನಿಮಾ ಸ್ಟುಡಿಯೋ ನಿರ್ಮಿಸಲು ಆಂಧ್ರ ಪ್ರದೇಶ ಸರ್ಕಾರ ಯೋಜನೆ ರೂಪಿಸಿದೆ.
ಫಿಲಂ ಸಿಟಿ ನಿರ್ಮಾಣ ಮಾಡುವ ಮಾತುಕತೆ ನಡೆಯುತ್ತಿರುವ ಬೆನ್ನಲ್ಲೇ ಆಂಧ್ರ ಸರ್ಕಾರ ಅತ್ಯಾಧುನಿಕ ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಮಹತ್ವದ ಘೋಷಣೆ ಮಾಡಿದೆ.
ಇದಕ್ಕಾಗಿ 100 ಎಕರೆ ಸ್ಥಳವನ್ನು ಗುರುತಿಸಲಾಗಿದ್ದು, ಇದರ ಹಿಂದೆ ಡಿಸಿಎಂ ಪವನ್ ಕಲ್ಯಾಣ್ ಶ್ರಮ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಆಂಧ್ರಪ್ರದೇಶದ ರಾಜಧಾನಿ ಅಮರಾವತಿ ಸನಿಹದಲ್ಲಿ 100 ಎಕರೆ ಜಾಗವನ್ನು ಗುರುತಿಸಲಾಗಿದ್ದು, ಅಲ್ಲಿ ಅತ್ಯಾಧುನಿಕ ಸೌಕರ್ಯಗಳನ್ನು ಹೊಂದಿರುವ ಬಲು ಅದ್ಧೂರಿಯಾದ ಸಿನಿಮಾ ಸ್ಟುಡಿಯೋ ನಿರ್ಮಾಣ ಆಗಲಿದೆ.
ಆಂಧ್ರದಲ್ಲಿ ಸಿನಿಮಾ ಕಾರ್ಯಗಳಿಗೆ ಒತ್ತು ನೀಡಲೆಂದೇ ಈಗ ಬೃಹತ್ ಸಿನಿಮಾ ಸ್ಟುಡಿಯೋ ನಿರ್ಮಾಣ ಮಾಡಲು ಆಂಧ್ರ ಸರ್ಕಾರ ಮುಂದಾಗಿದೆ.
ಇನ್ನು ಈ ಬಾರಿಯ ಕೇಂದ್ರ ಬಜೆಟ್‌ನಲ್ಲೂ ಕೂಡ ಆಂಧ್ರಪ್ರದೇಶಕ್ಕೆ ಬಂಪರ್ ಆಫರ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಅಭಿವೃದ್ಧಿ ಕಾರ್ಯಗಳತ್ತ ಮಹತ್ವದ ಹೆಜ್ಜೆ ಹಾಕಿದ್ದು, ಎಲ್ಲರನ್ನು ಆಶ್ಚರ್ಯ ಚಕಿತಗೊಳಿಸಿದೆ.
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ…
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…