Mysore
29
scattered clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಆಂಧ್ರಪ್ರದೇಶದ ಫಾರ್ಮಾ ಕಂಪನಿಯಲ್ಲಿ ಸ್ಫೋಟ: ಮೃತರ ಸಂಖ್ಯೆ 15ಕ್ಕೆ ಏರಿಕೆ

ಆಂಧ್ರಪ್ರದೇಶ: ಆಂಧ್ರಪ್ರದೇಶದ ಔಷಧ ತಯಾರಿಕಾ ಕಂಪನಿಯ ಘಟಕವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಿಲುಕಿ ಸಾವನ್ನಪ್ಪಿರುವವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಅನಕಪಲ್ಲಿ ಜಿಲ್ಲೆಯ ಅಚ್ಯುತಪುರದ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 33 ಮಂದಿ ಗಾಯಗೊಂಡಿದ್ದು, ಹಲವು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಮಧ್ಯಾಹ್ನದ ಊಟದ ವೇಳೆ ಸ್ಫೋಟ ಸಂಭವಿಸಿದ್ದು, ಅಲ್ಲಿ ಕಡಿಮೆ ಸಿಬ್ಬಂದಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರುವ ಸಾಧ್ಯತೆಯಿದೆ.

ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ವಾಹನಗಳು ಘಟಕದೊಳಗೆ ಸಿಲುಕಿಕೊಂಡಿದ್ದ 15 ಜನರನ್ನು ರಕ್ಷಿಸಲಾಗಿದೆ. ಘಟನೆಗೆ ಸಿಎಂ ಚಂದ್ರ ಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ.

 

 

Tags:
error: Content is protected !!