ರಾಜ್ಯ

ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ಅಂಗನವಾಡಿಗಳು ಆರಂಭವಾಗಿ 50 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 2ರ ಹೊತ್ತಿಗೆ ಸುವರ್ಣ ಮಹೋತ್ಸವ ಆಚರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,‌ ಕಾಪು ತಾಲೂಕು ಪಂಚಾಯತ್ ವತಿಯಿಂದ ಎಲ್ಲೂರಿನ ದುರ್ಗಾನಗರದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಎಲ್‌ಕೆಜಿ ಹಾಗೂ ಯುಕೆಜಿಯನ್ನು ಪ್ರಾರಂಭಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ 70 ಸಾವಿರ ಅಂಗನವಾಡಿ ಕೇಂದ್ರಗಳಿದ್ದು, ಹಂತ ಹಂತವಾಗಿ ಎಲ್ಲಾ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಪೂರ್ವ ಪ್ರಾಥಮಿಕ ಹಂತದಲ್ಲಿ ಎಲ್‌ಕೆಜಿ/ಯುಕೆಜಿ ಆರಂಭಿಸಲಿರುವ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೂ ಕರ್ನಾಟಕ ಪಾತ್ರವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.‌

ಸಮಾರಂಭದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ‌ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಉಪ ವಿಭಾಗಧಿಕಾರಿ ಎಸ್.ಆರ್. ರಶ್ಮಿ, ತಹಶಿಲ್ದಾರ್ ಪ್ರತಿಭಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ಯಾಮಲಾ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಡಿಕೇರಿ| ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ

ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್‌…

19 mins ago

ಕಾರು ಹರಿದು ನಾಟಕ ನೋಡಿ ಮಲಗಿದ್ದ ವ್ಯಕ್ತಿ ಸಾವು

ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ…

1 hour ago

ರಾಸಲೀಲೆ ವಿಡಿಯೋ ವೈರಲ್‌: ಡಿಜಿಪಿ ರಾಮಚಂದ್ರರಾವ್‌ ಅಮಾನತುಗೊಳಿಸಿ ಆದೇಶ

ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಡಿಯೋ ವೈರಲ್‌…

1 hour ago

ನಂಜನಗೂಡು| ಮನೆ ಮುಂದೆ ಕಟ್ಟಿದ್ದ ನಾಯಿ ಹೊತ್ತೊಯ್ದ ಚಿರತೆ: ಜನರಲ್ಲಿ ಆತಂಕ

ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ನಂಜನಗೂಡು ಭಾಗದ ಪ್ರದೇಶಕ್ಕೆ ಚಿರತೆ ಪ್ರವೇಶಿಸಿ ಭೀತಿಯನ್ನುಂಟು ಮಾಡಿದೆ. ನಂಜನಗೂಡು ತಾಲ್ಲೂಕಿನ…

2 hours ago

ಎಲ್ಲಾ ಸರ್ಕಾರಿ ಕಚೇರಿಗಳಿಗೂ ಸಿಸಿ ಕ್ಯಾಮರಾ ಅಳವಡಿಸಿ: ಸ್ನೇಹಮಯಿ ಕೃಷ್ಣ ಮನವಿ

ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ…

2 hours ago

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರಿನ ಹೆಬ್ಬಾಳು ಬಡಾವಣೆಯ ಸೂರ್ಯಬೇಕರಿ ಸಮೀಪ ಎರಡನೇ ಅಡ್ಡರಸ್ತೆಯ ಬಳಿ ಇರುವ ಚರಂಡಿಯನ್ನು ಕಳೆದ ಎರಡು-ಮೂರು ತಿಂಗಳಿನಿಂದ ಸ್ವಚ್ಛಗೊಳಿಸದೇ ಇರುವುದರಿಂದ…

5 hours ago