Mysore
22
overcast clouds
Light
Dark

ಅಂಗನವಾಡಿ ಶಿಕ್ಷಕಿಯರನ್ನು ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಅಂಗನವಾಡಿ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ನಗರದಲ್ಲಿ ಈ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಇಂದಿನಿಂದ ರಾಜ್ಯದ ೨೫೦ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸಾಂಕೇತಿಕವಾಗಿ ಆರಂಭವಾಗಿದೆ. ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್‌ , ಪುಸ್ತಕ,ಸಮವಸ್ತ್ರ ವಿತರಣೆ ಮಾಡಲಾಗುವುದು. ಈಗಾಗಲೇ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳಲ್ಲಿ ಗುಣಮಟ್ಟದ ಆಹಾರ ಮತ್ತು ಶಿಕ್ಷಕರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ. ೩೦ ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ತಿಳಿಸಿದರು.