ಬೆಂಗಳೂರು : ಅಂಗನವಾಡಿ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ.
ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಸಸ್ಪೆಂಡ್ ಮಾಡುವಂತೆ ಸೂಚಿಸಿದ್ದಾರೆ. ಇಡೀ ಪ್ರಕರಣದ ವರದಿ ನೀಡುವಂತ ಆದೇಶಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ದೇವರು ಕೊಟ್ಟರೂ ಪೂಜಾರಿ ಕೊಡಲ್ಲ ಎಂಬ ಮಾತಿದೆ. ಹಾಗೇ ಸರ್ಕಾರ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲೆಂದು ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಕೊಡುತ್ತಿದೆ. ನಾನು ಕೂಡ ಅಂಗನವಾಡಿಗಳಲ್ಲಿ ಶಿಸ್ತನ್ನು ತರಲು, ಬದಲಾವಣೆ ತರಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಗುಂಡೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯೇ ಮಕ್ಕಳ ಪ್ಲೇಟ್ ನಲ್ಲಿದ್ದ ಮೊಟ್ಟೆ ಎತ್ತಿಕೊಂಡಿದ್ದಾರೆ. ಮಕ್ಕಳು ತಿನ್ನಲು ಮುಂದಾದ ಮೊಟ್ಟೆ ಕಸಿದುಕೊಂಡಿದ್ದಾರೆ. ವಿಡೀಯೋ ನೋಡಿದರೆ ಕರುಳು ಚುರ್ ಎನ್ನುತ್ತದೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಅಮಾನತುಗೊಳಿಸಲಾಗಿದೆ. ಇಬ್ಬರನ್ನೂ ಶಾಶ್ವತವಾಗಿ ಡಿಸ್ ಮಿಸ್ ಮಾಡಲು ಸೂಚಿಸಿದ್ದೇನೆ. ಜೊತೆಗೆ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವತೆ ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.
ಅಲ್ಲದೆ, ಸಂಬಂಧಿಸಿದ ಸಿಡಿಪಿಒ ವಿರುದ್ಧವೂ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.
ನವದೆಹಲಿ: ಪವಿತ್ರ ಇರುಮುಡಿ ಕೆಟ್ಟನ್ನು ವಿಮಾನದ ಕ್ಯಾಬಿನ್ನಲ್ಲಿ ಕೈಚೀಲವಾಗಿ ಕೊಂಡೊಯ್ಯುವ ಅನುಮತಿಯನ್ನು ಸತತ ಮೂರನೇ ವರ್ಷವೂ ಮುಂದುವರಿಸಲಾಗಿದೆ ಎಂದು ನಾಗರಿಕ ವಿಮಾನಯಾನ…
ನವದೆಹಲಿ: ಚಿನ್ನದ ಬೆಲೆ ಕುಸಿತದ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಅಗತ್ಯವಿಲ್ಲದಿದ್ದರೆ ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದು…
ಮೈಸೂರು: ರವಿ ಹಂಜ್ ಅವರ ‘ಬಸವ ಮಂಟಪ’ ಪುಸ್ತಕದ ವಿವಾದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ…
ಗುಜರಾತ್: ಇಲ್ಲಿನ ಕಚ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ…
ಮಹಾದೇಶ್ ಎಂ. ಗೌಡ ಸಮರ್ಪಕ ರಸ್ತೆಯಿಲ್ಲ, ಚರಂಡಿಯಿಲ್ಲ, ಬೀದಿ ದೀಪಗಳಿಲ್ಲದೆ ನಿವಾಸಿಗಳ ಪರದಾಟ ಹನೂರು: ಮನೆಗಳಿಂದ ಬರುವ ಕೊಳಚೆ ನೀರು…
ಶುಭಾ ಸಂಜಯ್ ಅರಸ್ ಸಂಸ್ಥಾಪಕಿ ಮತ್ತು ವ್ಯವಸ್ಥಾಪಕಿ, ಮೈಸೂರು ಸಾಹಿತ್ಯ ಸಂಭ್ರಮ, ಮೈಸೂರು ಬುಕ್ ಕ್ಲಬ್ಸ್ ಚಾರಿಟೇಬಲ್ ಟ್ರಸ್ಟ್ ನವರಾತ್ರಿಯ…