ಬೆಂಗಳೂರು : 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಯುಕ್ತ ಸಂಘರ್ಷ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳ ವತಿಯಿಂದ 2011-12 ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಚಿವರು, ಈ ಸಂಬಂಧ ಶೀಘ್ರವೇ ನಿಯೋಗದೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಾಗುವುದು ಎಂದರು.
ಇದನ್ನು ಓದಿ: ತೀವ್ರಗೊಂಡ ಅನ್ನದಾತರ ಪ್ರತಿಭಟನೆ: ನಾಳೆ ಬೆಳಗಾವಿ ಬಂದ್‌ಗೆ ಕರೆ
ಇಲಾಖೆಯಲ್ಲಿ ಕೆಲ ಅಧಿಕಾರಿಗಳ ಅಚಾತುರ್ಯದಿಂದ 2011ನೇ ಸಾಲಿನ ಬದಲಾಗಿ 2023ನೇ ಸಾಲಿನಿಂದ ಗ್ರ್ಯಾಚುಟಿ ಜಾರಿಗೆ ಬಂದಿದೆ. ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು. ಈಗಾಗಲೇ 3-4 ಬಾರಿ ಹಣಕಾಸು ಇಲಾಖೆಯವರ ಜೊತೆ ಮಾತುಕತೆ ನಡೆಸಲಾಗಿದೆ. ಮುಖ್ಯಮಂತ್ರಿ ಅವರ ಜೊತೆ ಮಾತುಕತೆ ನಡೆಸಿ ಈ ಸಮಸ್ಯೆಯನ್ನು ಬಗೆ ಹರಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.
ಕರ್ನಾಟಕದಲ್ಲಿ ಅಂಗನವಾಡಿ ಆರಂಭವಾಗಿ 50 ವರ್ಷಗಳಾಗಿದ್ದು, ನವೆಂಬರ್ 19 ರಂದು ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಮಹಾ ಮಂಡಲದ ಅಧ್ಯಕ್ಷರಾದ ಜಿ.ಆರ್. ಶಿವಶಂಕರ್, ಪ್ರಧಾನ ಕಾರ್ಯದರ್ಶಿ ಬಿ.ನಾಗರತ್ನಮ್ಮ, ಎಐಯುಟಿಯುಸಿ ಅಧ್ಯಕ್ಷರಾದ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ, ಎಐಟಿಯುಸಿ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ, ಪ್ರಧಾನ ಕಾರ್ಯದರ್ಶಿ ಎಂ.ಉಮಾದೇವಿ ಸೇರಿದಂತೆ ಸಂಘಟನೆಯ ನೂರಾರು ಮಂದಿ ಉಪಸ್ಥಿತರಿದ್ದರು.
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…