ರಾಜ್ಯ

ಅಂಗನವಾಡಿ ಕಾರ್ಯಕರ್ತೆಯರ ಗ್ರ್ಯಾಚುಟಿ ಸಮಸ್ಯೆ ಶೀಘ್ರ ಇತ್ಯರ್ಥ : ಸಚಿವೆ ಹೆಬ್ಬಾಳಕರ್ ಭರವಸೆ

ಬೆಂಗಳೂರು : 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಯುಕ್ತ ಸಂಘರ್ಷ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳ ವತಿಯಿಂದ 2011-12 ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಚಿವರು, ಈ ಸಂಬಂಧ ಶೀಘ್ರವೇ ನಿಯೋಗದೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಾಗುವುದು ಎಂದರು.

ಇದನ್ನು ಓದಿ: ತೀವ್ರಗೊಂಡ ಅನ್ನದಾತರ ಪ್ರತಿಭಟನೆ: ನಾಳೆ ಬೆಳಗಾವಿ ಬಂದ್‌ಗೆ ಕರೆ

ಇಲಾಖೆಯಲ್ಲಿ ಕೆಲ ಅಧಿಕಾರಿಗಳ ಅಚಾತುರ್ಯದಿಂದ 2011ನೇ ಸಾಲಿನ ಬದಲಾಗಿ 2023ನೇ ಸಾಲಿನಿಂದ ಗ್ರ್ಯಾಚುಟಿ ಜಾರಿಗೆ ಬಂದಿದೆ.‌ ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು. ಈಗಾಗಲೇ 3-4 ಬಾರಿ ಹಣಕಾಸು ಇಲಾಖೆಯವರ ಜೊತೆ ಮಾತುಕತೆ ನಡೆಸಲಾಗಿದೆ. ಮುಖ್ಯಮಂತ್ರಿ ಅವರ ಜೊತೆ ಮಾತುಕತೆ ನಡೆಸಿ ಈ ಸಮಸ್ಯೆಯನ್ನು ಬಗೆ ಹರಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.

ಕರ್ನಾಟಕದಲ್ಲಿ ಅಂಗನವಾಡಿ ಆರಂಭವಾಗಿ 50 ವರ್ಷಗಳಾಗಿದ್ದು, ನವೆಂಬರ್ 19 ರಂದು ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಮಹಾ ಮಂಡಲದ ಅಧ್ಯಕ್ಷರಾದ ಜಿ.ಆರ್. ಶಿವಶಂಕರ್, ಪ್ರಧಾನ ಕಾರ್ಯದರ್ಶಿ ಬಿ.ನಾಗರತ್ನಮ್ಮ, ಎಐಯುಟಿಯುಸಿ ಅಧ್ಯಕ್ಷರಾದ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ, ಎಐಟಿಯುಸಿ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ, ಪ್ರಧಾನ ಕಾರ್ಯದರ್ಶಿ ಎಂ.ಉಮಾದೇವಿ ಸೇರಿದಂತೆ ಸಂಘಟನೆಯ ನೂರಾರು ‌ಮಂದಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

7 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

9 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

9 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

13 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

18 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

18 hours ago