ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಎರಡು ಲಕ್ಷ ರೂಪಾಯಿಗಳವರೆಗಿನ ಜೀವ ಮತ್ತು ಅಪಘಾತದ ವಿಮೆ ರಕ್ಷಣೆಯನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಇಂದು ಪೂರಕವಾಗಿ ಉತ್ತರಿಸಿದ ಅವರು, ಪ್ರತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವ ವಿಮೆ ಮತ್ತು ಎರಡು ಲಕ್ಷ ರೂಪಾಯಿಗಳವರೆಗಿನ ಆಕಸ್ಮಿಕ ರಕ್ಷಣೆಯ ಪ್ರಯೋಜನಗಳನ್ನು ವಿಸ್ತರಿಸಲಾಗಿದೆ ಮತ್ತು ರಾಜ್ಯ ಸರ್ಕಾರಕ್ಕೆ ಇದರ ಬಗ್ಗೆ ತಿಳಿಸಲಾಗಿದೆ.
ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಈ ಕಾರ್ಮಿಕರಿಗೆ ಪಿಂಚಣಿ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರತಿ ಸಮುದಾಯ ಆಧಾರಿತ ಕಾರ್ಯಕ್ರಮಕ್ಕೆ 250 ರೂಪಾಯಿಗಳನ್ನು ಕಾರ್ಮಿಕರಿಗೆ ನೀಡಲಾಗುತ್ತದೆ. ಮತ್ತು ಕಾರ್ಮಿಕರು ಫಲಾನುಭವಿಯ ಮನೆಗೆ ಭೇಟಿ ನೀಡಿದರೆ ಅಥವಾ WHO ಮಾನದಂಡಗಳ ಪ್ರಕಾರ ಮಗುವನ್ನು ಅಳತೆ ಮಾಡಿದರೆ 500 ರೂಪಾಯಿಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಆಯುಷ್ಮಾನ್ ಭಾರತ್‌ನ ಪ್ರಯೋಜನಗಳನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ವಿಸ್ತರಿಸಲಾಗಿದೆ ಎಂದು ನಿನ್ನೆ ಮಧ್ಯಂತರ ಬಜೆಟ್ ನಲ್ಲಿ ಸಚಿವರು ಘೋಷಿಸಿದ್ದಾರೆ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…