Mysore
19
scattered clouds
Light
Dark

ಅಂಗನವಾಡಿ ಕಾರ್ಯಕರ್ತೆಯರನ್ನ ಕೆಲಸದಿಂದ ತೆಗೆಯುವುದಿಲ್ಲ ; ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸಲು ಚಿಂತನೆ ನಡೆಸಿರುವ ಸರ್ಕಾರದ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ತೀವ್ರ ವಿರೋಧ ವ್ಯಕ್ತಪಡಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಅಂಗವಾಡಿ ಕಾರ್ಯಕರ್ತೆಯರ ಧರಣಿ ಬೆನ್ನಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗೆ ಬುಲಾವ್‌ ನೀಡಿ ವಿಧಾನಸೌಧದಲ್ಲಿ ಕಾರ್ಯಕರ್ತೆಯರ ಬೇಡಿಕೆ ವಿಚಾರವಾಗಿ ಸಾಕಷ್ಟು ಚರ್ಚೆ ನಡೆಸಿದರು.

ಸಿಎಂ ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್‌, ಪ್ರಸ್ತುತ 2600 ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ಮಾಡುವುದಕ್ಕೆ ಸುತ್ತೋಲೆ ತಂದಿದ್ದಾರೆ. ಇದರ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರ ಜೊತೆ ಚರ್ಚಿಸಿದ್ದೇವೆ. ಯಾರನ್ನೂ ಕೆಲಸದಿಂದ ತೆಗೆಯೋದಿಲ್ಲ ಎಂದರು

ಅಲ್ಲದೆ ಎಲ್​ಕೆಜಿ, ಯುಕೆಜಿಯನ್ನು ಸರ್ಕಾರಿ ಶಾಲೆಗಳಲ್ಲಿ‌ ಮಾಡಲು ಚಿಂತನೆ ಕೊಟ್ಟಿದ್ದಾರೆ. ಸರ್ಕಾರಿ ಶಾಲೆಗಳಲ್ಲೇ ಮಾಡಬೇಕೆಂಬ ಕಳಕಳಿ ಶಿಕ್ಷಣ ಇಲಾಖೆಗೂ ಇದೆ. ಆದರೆ ಅಂಗನವಾಡಿಯವರು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. 40 ವರ್ಷಗಳಿಂದ ನಾವು ಕೆಲಸ ಮಾಡುತ್ತಿದ್ದೇವೆ. ಮಕ್ಕಳಿಗೆ ಕಲಿಸುವ ಕೆಲಸವೂ ಆಗುತ್ತಿದೆ. ಹಾಗಾಗಿ ಬೇಡ ಅನ್ನೋದು ಅವರ ವಾದ. ಈ ನಿಟ್ಟಿನಲ್ಲಿ ತಜ್ಞರ ಕಮಿಟಿ ರಚನೆ ಮಾಡುವ ಚರ್ಚೆ ಆಗಿದೆ. ಅಂಗನವಾಡಿಗಳನ್ನ ಮೇಲ್ದೆರ್ಜೇಗೇರಿಸುವ ಕೆಲಸದ ಬಗ್ಗೆ ಸಿಎಂ ಹೇಳಿದ್ದಾರೆ ಎಂದು ತಿಳಿಸಿದರು.