Mysore
19
overcast clouds

Social Media

ಭಾನುವಾರ, 25 ಜನವರಿ 2026
Light
Dark

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ: ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸಿ ಎಂದ ಸಿ.ಟಿ.ರವಿ

ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು.

ಇಂದು ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಎಂಎಲ್‌ಸಿ ಸಿ.ಟಿ.ರವಿ ಅವರು ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಆಹಾರ ಸಚಿವ ಮುನಿಯಪ್ಪ ಅವರು, ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟವಾಗುತ್ತಿದೆ. ಅದನ್ನು ಪತ್ತೆ ಹಚ್ಚುವ ಕೆಲಸ ಆಗುತ್ತಿದೆ ಎಂದರು.

ದುಬೈನಲ್ಲಿ 150ರೂಗೆ ಅನ್ನಭಾಗ್ಯ ಅಕ್ಕಿ ಮಾರಾಟ ಆಗುತ್ತಿದೆ. ಈ ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸಿ ಎಂದು ಸಿ.ಟಿ.ರವಿ ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಮುನಿಯಪ್ಪ ಅವರು, ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.

Tags:
error: Content is protected !!