ಬೆಳಗಾವಿ: ಬೆಳಗಾವಿಯಲ್ಲಿ ಅನ್ನದಾತರ ಪ್ರತಿಭಟನೆ ತೀವ್ರಗೊಂಡಿದ್ದು, ನಾಳೆ ಬೆಳಗಾವಿ ಬಂದ್‌ಗೆ ಕರೆ ನೀಡಲಾಗಿದೆ.
ರಾಜ್ಯ ಸರ್ಕಾರದ ನಡೆ ಖಂಡಿಸಿ ಶಿವರಾಮೇಗೌಡ ಬಣ ನಾಳೆ ಬೆಳಗಾವಿ ಜಿಲ್ಲೆ ಬಂದ್‌ಗೆ ಕರೆ ನೀಡಿದೆ. ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬೆಳಗಾವಿ ಬಂದ್‌ಗೆ ಕರೆ ನೀಡಲಾಗಿದೆ.
ಬೆಳಗಾವಿಯ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ, ಅಹೋರಾತ್ರಿ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸುವಂತೆ ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ಹೆದ್ದಾರಿ ತಡೆ ನಡೆಸಿದ್ದು, ಲಾರಿಗಳನ್ನು ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.





