Mysore
17
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಬೆಂಗಳೂರು-ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಘೋಷಣೆ

ಬೆಂಗಳೂರು : ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಈ ಅನುಮೋದನೆಯಿಂದ ಎರಡೂ ನಗರಗಳ ನಾಗರಿಕರ ೩೦ ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ‘ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್‌ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದು, ಅವುಗಳ ನಿಲ್ದಾಣಗಳಲ್ಲಿನ ಸಾಮರ್ಥ್ಯದ ವಿಸ್ತರಣೆಯಿಂದಾಗಿ ಇದು ಈಗ ಸಾಧ್ಯವಾಗಿದೆ’ ಎಂದಿದ್ದಾರೆ ಎಂದು ತೇಜಸ್ವಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:-ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ | ಮಾಹಿತಿ ನೀಡೋದು ಕಡ್ಡಾಯವಲ್ಲ ; ಆಯೋಗ ಸ್ಪಷ್ಟನೆ

ಬೆಂಗಳೂರು ಮತ್ತು ಮುಂಬೈ ಭಾರತದ ಎರಡು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದರೂ, ಈ ಎರಡೂ ನಗರಗಳು ಕೇವಲ ಒಂದೇ ಒಂದು ರೈಲಿನಿಂದ ಸಂಪರ್ಕ ಹೊಂದಿದ್ದವು. ಆ ರೈಲು ಉದ್ಯಾನ ಎಕ್ಸ್‌ಪ್ರೆಸ್ ಆಗಿದ್ದು, ಈ ಪ್ರಯಾಣವನ್ನು ಪೂರ್ಣಗೊಳಿಸಲು ೨೪ ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿತ್ತು. ಇದು ೩೦ ವರ್ಷಗಳಿಂದ ಬಾಕಿ ಉಳಿದಿದ್ದ ಬೇಡಿಕೆಯಾಗಿದೆ.

ಕಳೆದ ವರ್ಷವೊಂದರಲ್ಲೇ ೨೬ ಲಕ್ಷಕ್ಕೂ ಹೆಚ್ಚು ಜನರು ಈ ಎರಡು ನಗರಗಳ ನಡುವೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಈ ಹೊಸ ಸೇವೆಯು ಲಕ್ಷಾಂತರ ನಾಗರಿಕರಿಗೆ ಪ್ರಯಾಣವನ್ನು ಹೆಚ್ಚು ಕೈಗೆಟುಕುವ ದರದಲ್ಲಿ ಅನುಕೂಲಕರವಾಗಿಸಲಿದೆ ಎಂದು ಹೇಳಿದ್ದಾರೆ.

ಈ ವಿಷಯದ ಕುರಿತಾಗಿ ಕಳೆದ ನಾಲ್ಕು ವರ್ಷಗಳಿಂದ ಸಂಸತ್ತಿನಲ್ಲಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಗಳಲ್ಲಿ ಮತ್ತು ಹಿರಿಯ ರೈಲ್ವೆ ಅಽಕಾರಿಗಳೊಂದಿಗೆ ನಿರಂತರ ಪ್ರಯತ್ನದ ಫಲವಾಗಿದೆ. ಈ ಹೊಸ ರೈಲು ಪ್ರಯಾಣದ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಮತ್ತು ವಿಮಾನ ಹಾಗೂ ಬಸ್‌ಗಳಿಗೆ ಆರಾಮದಾಯಕವಾದ ಪರ್ಯಾಯವನ್ನು ಒದಗಿಸುತ್ತದೆ ಎಂದಿದ್ದಾರೆ.

Tags:
error: Content is protected !!