ಬೆಂಗಳೂರು : ರಾಜ್ಯದ ವಿವಿಧ ಗ್ರಾಮ ಪಂಚಾಯ್ತಿಗಳ 262 ಸದಸ್ಯ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ವೇಳಾ ಪಟ್ಟಿ ಪ್ರಕಟಿಸಿದೆ. ಏಪ್ರಿಲ್ ತಿಂಗಳವರೆಗೆ ಅವ ಮುಕ್ತಾಯವಾಗುವ ಎಂಟು ಗ್ರಾಮ ಪಂಚಾಯ್ತಿಗಳ 127 ಸದಸ್ಯ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ 30 ಜಿಲ್ಲೆಗಳ 103 ಗ್ರಾಪಂಗಳ 135 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಆಯೋಗ ವೇಳಾಪಟ್ಟಿ ಘೋಷಣೆ ಮಾಡಿದೆ.
ಒಟ್ಟು 262 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ಆಯಾ ಜಿಲ್ಲಾಧಿಕಾರಿಗಳು ಫೆ.8ರಂದು ಚುನಾವಣಾ ಅಸೂಚನೆ ಹೊರಡಿಸಲಿದ್ದಾರೆ. ಅಂದಿನಿಂದ ಫೆ. 14ರವರೆಗೂ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ.
ಫೆ.15ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆಯನ್ನು ವಾಪಸ್ ಪಡೆಯಲು ಫೆ.17 ಕಡೆಯ ದಿನವಾಗಿದೆ. ಅಗತ್ಯವಿದ್ದರೆ ಫೆ.25ರಂದು ಬೆಳಗ್ಗೆ 7ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಮತದಾನ ನಡೆಸಲಾಗುತ್ತದೆ. ಒಂದು ವೇಳೆ ಮರು ಮತದಾನದ ಅವಶ್ಯಕತೆ ಇದ್ದರೆ ಫೆ.27ರಂದು ನಡೆಸಲಾಗುವುದು.
ಫೆ.28ರಂದು ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, ಅಂದೇ ಫಲಿತಾಂಶ ಹೊರ ಬೀಳಲಿದೆ. ಚುನಾವಣಾ ಅಧಿಸೂಚನೆ ಹೊರಡಿಸುವ ಫೆ.8ರಿಂದಲೇ ಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವ ಫೆ28ರವರೆಗೂ ಜಾರಿಯಲ್ಲಿರುತ್ತದೆ ಎಂದು ಆಯೋಗದ ಅಧಿಕೃತ ಪ್ರಕಟಣೆ ತಿಳಿಸಿದೆ.
ದೇವನಹಳ್ಳಿ ತಾಲ್ಲುಕಿನ ಕೋರಮಂಗಲ, ಹಾರೋಹಳ್ಳಿ. ಬಂಟ್ವಾಳ ತಾಲ್ಲೂಕಿನ ಪುದು, ಸಕಲೇಶಪುರ ತಾಲ್ಲೂಕಿನ ಉಚ್ಚಂಗಿ, ವಣಗೂರು, ಮುದ್ದೆಬಿಹಾಳ ತಾಲ್ಲೂಕಿನ ಇಂಗಳಗೇರಿ, ಹರಪ್ಪನಹಳ್ಳಿ ತಾಲ್ಲೂಕಿನ ಹಾರಕನಾಳು ಹಾಗೂ ಗುರುಮಿಟಕಲ್ ತಾಲ್ಲೂಕಿನ ಅನಪೂರ ಗ್ರಾಮ ಪಂಚಾಯ್ತಿಗಳ 127 ಸದಸ್ಯ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.