ಬೆಂಗಳೂರು : ಸಾಹಸಸಿಂಹ ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾ ದೇವಿಯವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಈ ಮೂಲಕ ಸಭೆಯಲ್ಲಿ ಮಹತ್ಸದ ತೀರ್ಮಾನ ಮಾಡಲಾಗಿದೆ.
ವಿಷ್ಣುವರ್ಧನ್ ಅವರಿಗೆ ಸಿನಿಮಾ ಕ್ಷೇತ್ರದಲ್ಲಿನ ಕೊಡುಗೆ ಪರಿಗಣಿಸಿ ಕರ್ನಾಟಕ ರತ್ನ ಪುರಸ್ಕಾರ ನೀಡಬೇಕೆಂದು ಅವರ ಪತ್ನಿ ಭಾರತೀ ವಿಷ್ಣುವರ್ಧನ್, ಅಳಿಯ ಅನಿರುದ್ಧ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಜೊತೆಗೆ ನಟಿಯರಾದ ತಾರಾ, ಶೃತಿ, ಮಾಳವಿಕಾ ಅವಿನಾಶ್ ಕೂಡ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ಭೇಟಿಯಾಗಿ ಕರ್ನಾಟಕ ರತ್ನ ಪುರಸ್ಕಾರ ನೀಡಲು ಮನವಿ ಮಾಡಿದ್ದರು.
ಇದರ ಬಗ್ಗೆ ಇಂದು(ಸೆ.೧೧) ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಿ ಸಾಹಸ ಸಿಂಹ ವಿಷ್ಣುವರ್ಧನ್ ಹಾಗೂ ನಟಿ ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪುರಸ್ಕಾರ ನೀಡಲು ಒಪ್ಪಿಗೆ ನೀಡಲಾಗಿದೆ. ಅಲ್ಲದೆ, ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶ್ತಿ ನೀಡಬೇಕು ಎಂದು ಕೇಂದ್ರಕ್ಕೆ ಸಂಪುಟ ಶಿಫಾರಸು ಮಾಡಲು ನಿರ್ಧಾರ ಮಾಡಿದೆ.
ಈ ಹಿಂದೆ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪುರಸ್ಕಾರ ನೀಡಲಾಗಿತ್ತು. ಈಗ ಮರಣೋತ್ತರವಾಗಿ ಸಾಹಸ ಸಿಂಹ ವಿಷ್ಣುವರ್ಧನ್ ಹಾಗೂ ನಟಿ ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪುರಸ್ಕಾರ ನೀಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.





