ರಾಜ್ಯ

ಅರ್ಜುನ ಆನೆ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ : ಸಚಿವ ಈಶ್ವರ ಖಂಡ್ರೆ

ಬೀದರ : ಹಾಸನದ ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದ್ದು, ನಾಡಿದ್ದು (ಆ.4) ಗಜಪಯಣದ ವೇಳೆ ಮಾವುತ/ ಸಿಬ್ಬಂದಿಗೆ ಪ್ರಥಮ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೀದರ್ ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ. ಕೋಟೆ ಶಾಸಕ ಅನಿಲ್ ಕುಮಾರ್ ಅವರು ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸುವ ಸಲಹೆ ನೀಡಿದ್ದರು. ಈ ಸಲಹೆ ಪುರಸ್ಕರಿಸಿ, ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ಹಾಗೂ ವನ್ಯಪ್ರಾಣಿಗಳನ್ನು ಸೆರೆಹಿಡಿಯುವ ಕಾರ್ಯಚರಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಕಾರ್ಯಚರಣೆಯನ್ನು ಯಶಸ್ವಿಗೊಳಿಸಿರುವ ಹಾಗೂ ಸೆರೆಹಿಡಿಯುವ ಆನೆಗಳನ್ನು ಪಳಗಿಸಿ ಆರೈಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಾವುತ/ಸಿಬ್ಬಂದಿಗಳನ್ನು ಗುರುತಿಸಿ ಪ್ರತಿವರ್ಷ ನಡೆಯುವ ಗಜಪಯಣದ ಸಂದರ್ಭದಲ್ಲಿ “ಅರ್ಜುನ ಆನೆ” ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದರು.

1968ರಲ್ಲಿ ಕಾಕನಕೋಟೆಯಲ್ಲಿ ನಡೆದ ಖೆಡ್ಡಾ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ 22 ಬಾರಿ ಜಂಬೂಸವಾರಿಯಲ್ಲಿ ಭಾಗಿಯಾಗಿ, 8 ಬಾರಿ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು, ದೇಶದ ಜನರ ಮನ ಗೆದ್ದಿದ್ದ. ಅರಣ್ಯ ಸಿಬ್ಬಂದಿಯ ಪ್ರಾಣ ಉಳಿಸಲು ಪ್ರಾಣತ್ಯಾಗ ಮಾಡಿದ ಅರ್ಜುನನ ಹೆಸರು ಚಿರಸ್ಥಾಯಿಯಾಗಿ ಉಳಿಯುವಂತೆ ಈ ಪ್ರಶಸ್ತಿ ಸ್ಥಾಪಿಸಲಾಗಿದೆ ಎಂದರು.

ನಾಡಿದ್ದು ವೀರನಹೊಸಹಳ್ಳಿಯಲ್ಲಿ ನಡೆಯಲಿರುವ ಗಜ ಪಯಣದ ಸಂದರ್ಭದಲ್ಲಿ ಹಾಸನ, ಸಕಲೇಶಪುರ, ಕೊಡಗು ಮೊದಲಾದ ಕಡೆಗಳಲ್ಲಿ ಆನೆ ಮತ್ತು ವನ್ಯಜೀವಿ ಸೆರೆ ಕಾರ್ಯಚರಣೆಗಳಲ್ಲಿ ಯಶಸ್ವಿಯಾಗಿ ಭಾಗಿಯಾಗಿರುವ ಭೀಮ ಆನೆಯ ಮಾವುತ ಗುಂಡ ಹಾಗೂ ಕವಾಡಿ ನಂಜುಂಡಸ್ವಾಮಿ ಅವರಿಗೆ 2025ರ ಸಾಲಿನ “ಅರ್ಜುನ ಆನೆ” ಪ್ರಶಸ್ತಿ ನೀಡಲು 2025ರ ದಸರಾ ಆನೆಗಳ ಆಯ್ಕೆ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago