ರಾಜ್ಯ

ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು

ಬೆಳಗಾವಿ: ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿದಿದೆ.

ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಇದೇ ನವೆಂಬರ್‌.13ರಂದು 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಮತ್ತೊಂದಯ ಕೃಷ್ಣಮೃಗ ಮೃತಪಟ್ಟಿದೆ. ಕೃಷ್ಣಮೃಗಗಳ ನಿಗೂಢ ಸಾವಿನಿಂದ ಮೃಗಾಲಯದಲ್ಲಿ ಆತಂಕ ಮನೆಮಾಡಿದ್ದು, ಇತರ ಪ್ರಾಣಿಗಳ ಮೇಲೆ ತೀವ್ರ ನಿಗಾ ಇಡಲಾಗಿದೆ.

ಮೃಗಾಲಯಕ್ಕೆ ಬನ್ನೇರುಘಟ್ಟ ಪಶು ವಿಜ್ಞಾನ ವಿದ್ಯಾಲಯದ ತಜ್ಞರ ತಂಡ ಭೇಟಿ ನೀಡಿದ್ದು, ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕವಷ್ಟೇ ಕೃಷ್ಣಮೃಗಗಳ ಸಾವಿಗೆ ಖಚಿತ ಮಾಹಿತಿ ಲಭ್ಯವಾಗಲಿದೆ.

ಈ ಬೆನ್ನಲ್ಲೇ ಮೃಗಾಲಯದಲ್ಲಿರುವ ಉಳಿದ 9 ಕೃಷ್ಣಮೃಗಗಳಿಗೆ ಮುಂಜಾಗ್ರತಾ ಕ್ರಮವಾಗಿ ತಪಾಸಣೆ, ಚಿಕಿತ್ಸೆ ನೀಡಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

28 mins ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

38 mins ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

1 hour ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

2 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

2 hours ago

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

4 hours ago