ಬೆಂಗಳೂರು: ತನ್ನ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲು ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಎರಡನೇ ದೂರು ಇದಾಗಿದ್ದು, ಗೃಹ ಸಚಿವ ಜಿ ಪರಮೇಶ್ವರ್ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ಮನೆ ಕೆಲಸ ನಿರ್ವಹಿಸುತ್ತಿದ್ದ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿಯಲ್ಲಿ ಜೆಡಿಎಸ್‌ನ ಹೆಚ್‌ಡಿ ರೇವಣ್ಣ ಹಾಗೂ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆ ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರನ್ನೇ ಆಧರಿಸಿ ಎಸ್‌ಐಟಿ ತನಿಖೆ ಆರಂಭಿಸಿದೆ.
ಸದ್ಯ ಇದೀಗ ಪ್ರಜ್ವಲ್ ರೇವಣ್ಣ ವಿರುದ್ದ ಎರಡನೇ ದೂರು ದಾಖಲಾಗಿದ್ದು, ಈ ದೂರಿನ ತನಿಖೆಯನ್ನೂ ಸಹ ಎಸ್‌ಐಟಿ ಕೈಗೆತ್ತಿಕೊಂಡಿದೆ. ಈ ದೂರಿನ ಕುರಿತಾಗಿ ಮಾಧ್ಯಮದವರ ಜತೆ ಮಾತನಾಡಿದ ಪರಮೇಶ್ವರ್ ʼಮತ್ತೊಬ್ಬ ಮಹಿಳೆ ದೂರು ನೀಡಿದ್ದಾರೆ. ಇದು ಎರಡನೇ ದೂರು. ಮಹಿಳೆಯರು ಧೈರ್ಯವಾಗಿ ಬಂದು ದೂರು ನೀಡಬಹುದು. ತಮಗೆ ಸರ್ಕಾರ ಎಲ್ಲಾ ರೀತಿಯ ಭದ್ರತೆಯನ್ನು ನೀಡಲಿದೆʼ ಎಂದು ಹೇಳಿಕೆ ನೀಡಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…
ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…