ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು: ತನ್ನ ಮೇಲೆ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲು ಮಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿರುವ ಎರಡನೇ ದೂರು ಇದಾಗಿದ್ದು, ಗೃಹ ಸಚಿವ ಜಿ ಪರಮೇಶ್ವರ್‌ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಮನೆ ಕೆಲಸ ನಿರ್ವಹಿಸುತ್ತಿದ್ದ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿಯಲ್ಲಿ ಜೆಡಿಎಸ್‌ನ ಹೆಚ್‌ಡಿ ರೇವಣ್ಣ ಹಾಗೂ ಪುತ್ರ ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆ ನರಸೀಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರನ್ನೇ ಆಧರಿಸಿ ಎಸ್‌ಐಟಿ ತನಿಖೆ ಆರಂಭಿಸಿದೆ.

ಸದ್ಯ ಇದೀಗ ಪ್ರಜ್ವಲ್‌ ರೇವಣ್ಣ ವಿರುದ್ದ ಎರಡನೇ ದೂರು ದಾಖಲಾಗಿದ್ದು, ಈ ದೂರಿನ ತನಿಖೆಯನ್ನೂ ಸಹ ಎಸ್‌ಐಟಿ ಕೈಗೆತ್ತಿಕೊಂಡಿದೆ. ಈ ದೂರಿನ ಕುರಿತಾಗಿ ಮಾಧ್ಯಮದವರ ಜತೆ ಮಾತನಾಡಿದ ಪರಮೇಶ್ವರ್‌ ʼಮತ್ತೊಬ್ಬ ಮಹಿಳೆ ದೂರು ನೀಡಿದ್ದಾರೆ. ಇದು ಎರಡನೇ ದೂರು. ಮಹಿಳೆಯರು ಧೈರ್ಯವಾಗಿ ಬಂದು ದೂರು ನೀಡಬಹುದು. ತಮಗೆ ಸರ್ಕಾರ ಎಲ್ಲಾ ರೀತಿಯ ಭದ್ರತೆಯನ್ನು ನೀಡಲಿದೆʼ ಎಂದು ಹೇಳಿಕೆ ನೀಡಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

7 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

11 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

11 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

11 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

11 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

11 hours ago