ರಾಜ್ಯ

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ ಕಾಲ ಪ್ರತಿದಿನ 9 ಸಾವಿರ ಕ್ಯೂಸೆಕ್ಸ್ ನೀರಿನ ಹರಿವು ಖಚಿತಪಡಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಸೋಮವಾರ ಸೂಚಿಸಿದೆ.

ಆಗಸ್ಟ್ 25ರ ಬೆಳಗ್ಗೆ 8 ಗಂಟೆಯಿಂದ ಈ ಆದೇಶ ಜಾರಿಗೆ ಬರಲಿದೆ. ಈ ಮೂಲಕ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಸತತ ಮೂರನೇ ಬಾರಿ ನೀರು ಹರಿಸುವ ಸೂಚನೆ ಬಂದಂತಾಗಿದೆ. ಮೊದಲಿಗೆ 3 ಸಾವಿರ ಕ್ಯೂಸೆಕ್ಸ್, ಬಳಿಕ 12 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸೂಚಿಸಲಾಗಿತ್ತು. ಇದೀಗ 12 ಸಾವಿರ ಕ್ಯೂಸೆಕ್ಸ್ ಆದೇಶವನ್ನು ಕಡಿಮೆ ಮಾಡಿ 9 ಸಾವಿರ ಕ್ಯೂಸೆಕ್ಸ್‌ಗೆ ನಿಗದಿಪಡಿಸಲಾಗಿದೆ.

15 ದಿನಕ್ಕೆ 11.66 ಟಿಎಂಸಿ ನೀರು ಸಿಡಬ್ಲ್ಯುಆರ್‌ಸಿ ನಿರ್ಧಾರದಂತೆ ಆಗಸ್ಟ್ 25ರಿಂದ ಮುಂದಿನ 15 ದಿನಗಳ ಅವಧಿಯಲ್ಲಿ ಬಿಳಿಗುಂಡ್ಲುವಿನಲ್ಲಿ ಒಟ್ಟು ಸುಮಾರು 11.66 ಟಿಎಂಸಿ ನೀರು ಹರಿಯುವಂತೆ ಕರ್ನಾಟಕ ಖಚಿತಪಡಿಸಬೇಕಿದೆ.

ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳ ಮೇಲ್ಭಾಗದಲ್ಲಿರುವ ಕೇಂದ್ರಗಳ ಅಂಕಿ-ಅಂಶಗಳು ಹಾಗೂ ಮುಂದಿನ ಏಳು ದಿನಗಳ ಒಳಹರಿವಿನ ಮುನ್ಸೂಚನೆಗಳನ್ನು ಸಿಡಬ್ಲ್ಯುಆರ್‌ಸಿ ಪರಿಗಣಿಸಿದೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

9 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

9 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

11 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

14 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

15 hours ago