ರಾಮನಗರ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಮತ್ತು ಅದರ ನಿರೂಪಕ ನಟ ಕಿಚ್ಚ ಸುದೀಪ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
ಇತ್ತೀಚೆಗೆ ಪ್ರಸಾರವಾಗಿದ್ದ ಬಿಗ್‌ಬಾಸ್ ಸಂಚಿಕೆಯಲ್ಲಿ ನಿರೂಪಣೆ ಮಾಡುವ ವೇಳೆ ನಟ ಸುದೀಪ್ ರಣಹದ್ದುಗಳ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು. ರಣಹದ್ದು ಕುರಿತು ಹೊಂಚು ಹಾಕಿ ಸಂಚು ಮಾಡಿ ಕರೆಕ್ಟ್ ಟೈಮ್‌ಗೆ ಲಬಕ್ ಅಂತಾ ಹಿಡಿಯುವುದು ಎಂಬ ಹೇಳಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಪಕ್ಷಿಪ್ರೇಮಿಗಳು ಹಾಗೂ ಕರ್ನಾಟಕ ಸಂರಕ್ಷಣಾ ಟ್ರಸ್ಟ್ ವತಿಯಿಂದ ಬೆಂಗಳೂರು ದಕ್ಷಿಣ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ದೂರು ನೀಡಲಾಗಿದೆ.




