Mysore
30
scattered clouds

Social Media

ಭಾನುವಾರ, 22 ಫೆಬ್ರವರಿ 2026
Light
Dark

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕಾಫಿ ತೋಟದಲ್ಲಿ ಕಾರ್ಮಿಕ ಮಹಿಳೆಯನ್ನು ಕಾಡಾನೆ ಬಲಿ ಪಡೆದಿದೆ.

ಚಿಕ್ಕಮಗಳೂರು ತಾಲ್ಲೂಕಿನ ಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಹೊಸಪೇಟೆ ಮೂಲದ ಬೋರಮ್ಮ ಎಂಬುವವರೇ ಮೃತಪಟ್ಟ ದುರ್ದೈವಿ.

ತಾಲ್ಲೂಕಿನ ಪುರ ಗ್ರಾಮದ ಲೈನ್‌ ಮನೆಯ ಬಳಿ ಕಾಡಾನೆ ದಾಳಿ ಮಾಡಿದ್ದು, ಚಿಕ್ಕಮಗಳೂರಿನಲ್ಲಿ 7 ದಿನಗಳ ಅಂತರದಲ್ಲಿ ಎರಡನೇ ಬಲಿಯಾಗಿದೆ.

ಕಾಡಾನೆ ಸೆರೆಗೆ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಮತ್ತೊಂದು ಕಡೆ ಕಾರ್ಮಿಕ ಮಹಿಳೆಯನ್ನು ಆನೆ ಬಲಿ ಪಡೆದಿದೆ.

ಕಾಡಾನೆ ಸೆರೆಗೆ ಏಳು ಕುಮ್ಕಿ ಆನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಕಾರ್ಯಾಚರಣೆ ವೇಳೆ ದಾಳಿ ಮಾಡಿ ಕಾಡಾನೆ ಮಹಿಳೆಯನ್ನು ಬಲಿ ಪಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Tags:
error: Content is protected !!