g parameshwara opinion about janivara
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿ ಗುದ್ದಾಟದ ನಡೆದ ಸಿಎಂ ಆಪ್ತ ಗುಂಪಿನಿಂದ ಮತ್ತೊಂದು ಸ್ಫೋಟಕ ಸಂದೇಶ ರವಾನೆಯಾಗಿದೆ.
ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ನಿರ್ಧರಿಸಿದರೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಮುಖ್ಯಮಂತ್ರಿ ಆಕಾಂಕ್ಷೆ ಬಗ್ಗೆ ಕೇಳಿದಾಗ, ನಾನು ಮುಖ್ಯಮಂತ್ರಿ ರೇಸ್‍ನಲ್ಲಿದ್ದೇನೆ ಎಂದು ಸ್ವಾಭಾವಿಕವಾಗಿಯೇ ಉತ್ತರಿಸುತ್ತೇನೆ. ಆದರೆ ಅಧಿಕಾರ ಬದಲಾವಣೆಯಾಗಿ ಡಿಕೆ ಮುಖ್ಯಮಂತ್ರಿಯಾದರೆ, ನಾವು ಅದನ್ನು ಒಪ್ಪಿಕೊಳ್ಳುತ್ತೇವೆ ಎಂದು ಹೇಳಿದರು.
ಇದನ್ನು ಓದಿ: ಅಧಿಕಾರ ಹಂಚಿಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ
ಇದು ರಾಜ್ಯದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಹುದ್ದೆ ಪೈಪೋಟಿ ನಡುವೆ ಸಿದ್ದರಾಮಯ್ಯ ಬಣದಿಂದ ಬಂದ ಮಹತ್ವದ ಸಂದೇಶವಾಗಿದೆ. ಪಕ್ಷ ಒಪ್ಪಿದರೆ ಬದಲಾವಣೆ ಸುಗಮವಾಗಿರುತ್ತದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಹುದ್ದೆ ಆಕಾಂಕ್ಷೆ ತನಗೂ ಇದೆ ಎಂದು ಅವರು ಪುನರುಚ್ಚರಿಸಿದರು. ಪಕ್ಷಕ್ಕಾಗಿ ತನ್ನ ಕೊಡುಗೆ ಹೈಕಮಾಂಡ್‌ಗೆ ತಿಳಿದಿದೆ. ಆದರೆ ಅಂತಿಮ ತೀರ್ಮಾನವನ್ನು ಅವರಿಗೆ ಬಿಟ್ಟಿದ್ದೇನೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ “ಮುಖ್ಯಮಂತ್ರಿ ಹುದ್ದೆಗೆ ಸೂಕ್ತ ಅಭ್ಯರ್ಥಿ” ಎಂದು ಪರಮೇಶ್ವರ್ ಹೇಳಿದರು. ಆದರೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಯಾವುದೇ ಒಪ್ಪಂದದ ಬಗ್ಗೆ ತಮಗೆ ತಿಳಿದಿಲ್ಲ ಎಂದರು.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…