Mysore
30
scattered clouds

Social Media

ಭಾನುವಾರ, 09 ಫೆಬ್ರವರಿ 2025
Light
Dark

ಕಾರ್ಮಿಕರ ಮನೆ ನೆಲಸಮ ಆರೋಪ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್‌

ಬೆಂಗಳೂರು: ದಿನಗೂಲಿ ಕಾರ್ಮಿಕರ ಮನೆ ನೆಲಸಮಗೊಳಿಸಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ.

ಈಗಾಗಲೇ ಅತ್ಯಾಚಾರ, ಹನಿಟ್ರ್ಯಾಪ್, ಭ್ರಷ್ಟಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಶಾಸಕ ಮುನಿರತ್ನ ಕ್ರಿಮಿನಲ್‌ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ.

ಈಗ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ದಿನಗೂಲಿ ಕಾರ್ಮಿಕರ ಮನೆಗಳನ್ನು ನೆಲಸಮ ಮಾಡಿರುವ ಆರೋಪದ ಮೇಲೆ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಇನ್ನು ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಕೊಳೆಗೇರಿಯಲ್ಲಿ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿ ತಂದು ಏಕಾಏಕಿ ಎಲ್ಲರ ಮನೆಯನ್ನು ನೆಲಸಮ ಮಾಡಿದ್ದಾರೆ ಎಂಬ ಆರೋಪದ ಮೇಲೆ ದೂರು ದಾಖಲಾಗಿದೆ.

Tags: