ಬೆಂಗಳೂರು: ದಿನಗೂಲಿ ಕಾರ್ಮಿಕರ ಮನೆ ನೆಲಸಮಗೊಳಿಸಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.
ಈಗಾಗಲೇ ಅತ್ಯಾಚಾರ, ಹನಿಟ್ರ್ಯಾಪ್, ಭ್ರಷ್ಟಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಶಾಸಕ ಮುನಿರತ್ನ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ.
ಈಗ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ದಿನಗೂಲಿ ಕಾರ್ಮಿಕರ ಮನೆಗಳನ್ನು ನೆಲಸಮ ಮಾಡಿರುವ ಆರೋಪದ ಮೇಲೆ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಇನ್ನು ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಕೊಳೆಗೇರಿಯಲ್ಲಿ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿ ತಂದು ಏಕಾಏಕಿ ಎಲ್ಲರ ಮನೆಯನ್ನು ನೆಲಸಮ ಮಾಡಿದ್ದಾರೆ ಎಂಬ ಆರೋಪದ ಮೇಲೆ ದೂರು ದಾಖಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…