Mysore
29
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌

snehamhi krishna

ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ.

ಪವಿತ್ರಾ ಎಂಬ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬೆದರಿಕೆ ಹಾಗೂ ಪ್ರೊ. ಮೈಲಾರಪ್ಪ ವಿರುದ್ಧ ಕೊಟ್ಟಿರುವ ಕೇಸ್‌ ವಾಪಸ್‌ ಪಡೆದುಕೊಳ್ಳುವಂತೆ ಬೆದರಿಕೆ ಹಾಗೂ ಒತ್ತಡ ಹಾಕುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಎ1 ಆರೋಪಿಯನ್ನಾಗಿ ಬಸವೇಶ್ವರ ನಗರ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

 

Tags:
error: Content is protected !!