Mysore
29
scattered clouds

Social Media

ಮಂಗಳವಾರ, 19 ಮೇ 2026
Light
Dark

ಚಾರ್ಮಾಡಿ ಘಾಟ್‌ ಅರಣ್ಯದಲ್ಲಿ ಮತ್ತೆ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ.

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ ಘಾಟ್‌ ಅರಣ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಬಿದ್ದಿದ್ದು, ಕಾಡ್ಗಿಚ್ಚು ಕ್ಷಣದಿಂದ ಕ್ಷಣಕ್ಕೆ ಹಬ್ಬಲು ಪ್ರಾರಂಭವಾಗಿದೆ.

ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಿಪ್ರವಾಗಿ ಹರಡುತ್ತಿದೆ.

ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ ಮುಂಜಾಗ್ರತೆ ಕ್ರಮವಾಗಿ ಈ ಭಾಗದಲ್ಲಿ ಬೆಂಕಿ ರೇಖೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

 

Tags:
error: Content is protected !!